ಮೊಬೈಲ್‌ ಖರೀದಿಸಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ

ಬುಧವಾರ, ಜೂನ್ 19, 2019
31 °C

ಮೊಬೈಲ್‌ ಖರೀದಿಸಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ

Published:
Updated:

ಪಣಜಿ: ಮೊಬೈಲ್‌ ಖರೀದಿಸಲು ತಂದೆ ಅನುಮತಿ ನೀಡದ ಕಾರಣ 17 ವರ್ಷದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿ ಇಲ್ಲಿನ ಸಂಖಾಲಿಂ ಗ್ರಾಮದ ನಿವಾಸಿಯಾಗಿದ್ದು, ಮನೆಯಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಯುವತಿಯ ತಾಯಿ ಸ್ನಾನಕ್ಕೆ ತೆರಳಿದ್ದರು ಮತ್ತು ತಂದೆ ಮತ್ತೊಬ್ಬ ಮಗಳನ್ನು ಕಾಲೇಜಿಗೆ ಬಿಡಲು ಹೋಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಯಿ ಸ್ನಾನ ಮುಗಿಸಿ ಹೊರಕ್ಕೆ ಬಂದಾಗ ವಿಷಯ ತಿಳಿದಿದೆ. ಕೂಡಲೇ ಬೆಂಕಿಯನ್ನು ನಂದಿಸಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋದರು. ಆದರೆ, ಯುವತಿಗೆ ಗಂಭೀರ ಗಾಯಗಳಾಗಿದ್ದರಿಂದ ಆಸ್ಪತ್ರೆಯಲ್ಲಿಯೇ ಮೃತಪಟ್ಟರು ಎಂದು ಹೇಳಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry