ಕ್ರೀಡಾನಿಲಯದಲ್ಲಿ ಹಬ್ಬಿದ ಡೆಂಗಿ

ಮಂಗಳವಾರ, ಜೂನ್ 25, 2019
26 °C

ಕ್ರೀಡಾನಿಲಯದಲ್ಲಿ ಹಬ್ಬಿದ ಡೆಂಗಿ

Published:
Updated:

ಬೆಂಗಳೂರು: ಇಲ್ಲಿನ ಕಂಠೀರವ ಕ್ರೀಡಾ ನಿಲಯದ ಅಥ್ಲೀಟ್‌ಗಳಲ್ಲಿ ಡೆಂಗಿ ಹಬ್ಬಿರುವುದು ಬೆಳಕಿಗೆ ಬಂದಿದೆ. ಆರು ವಿದ್ಯಾರ್ಥಿಗಳು ಕಳೆದ ಒಂದು ತಿಂಗಳಿನಿಂದ ಡೆಂಗಿ ಜ್ವರದಿಂದ ಬಳಲುತ್ತಿದ್ದಾರೆ.

ಇತ್ತೀಚೆಗೆ ಸುರಿದ ಭಾರಿ ಮಳೆ ಯಿಂದಾಗಿ ಕ್ರೀಡಾನಿಲಯದ ಸುತ್ತ ಕೊಳಚೆ ತುಂಬಿಕೊಂಡಿದೆ. ಸೊಳ್ಳೆಗಳ ಕಾಟವೂ ವಿಪರೀತವಾಗಿದೆ. ಡೆಂಗಿ ಜ್ವರ ವ್ಯಾಪಿಸಲು ಇದೇ ಕಾರಣ ಎಂದು ಕೆಲವರು ದೂರಿದ್ದಾರೆ. ಕ್ರೀಡಾ ನಿಲಯದಲ್ಲಿ ಕಳಪೆ ಆಹಾರ ವಿತರಿಸಲಾಗುತ್ತಿದೆ ಎಂದು ಪ್ರತಿಭಟನೆ ಕೂಡ ನಡೆಸಲಾಗಿತ್ತು.

‘ಡೆಂಗಿ ಜ್ವರದ ಸಮಸ್ಯೆ ಹೆಚ್ಚಾಗಿದೆ. ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ವರದಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಯಾವುದೇ ಪರಿಹಾರ ಸಿಕ್ಕಿಲ್ಲ. ಬಿಬಿಎಂಪಿ ಕೂಡ ಸಮಸ್ಯೆಗೆ ಸ್ಪಂದಿಸಿಲ್ಲ’ ಎಂದು ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry