ಚಿಕ್ಕಮಗಳೂರು: ‘ಜಿಲ್ಲೆಯಲ್ಲಿ 450 ಹೋಮ್ ಸ್ಟೇಗಳಿದ್ದು, ಈ ಪೈಕಿ 281 ಹೋಮ್ ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿವೆ. 169 ಹೋಮ್ ಸ್ಟೇಗಳು ಈವರೆಗೂ ಅರ್ಜಿ ಸಲ್ಲಿಸದಿರುವುದು ಸಮೀಕ್ಷೆಯಲ್ಲಿ ತಿಳಿದುಬಂದಿದೆ’ ಎಂದು ಭದ್ರಾ ವನ್ಯಜೀವಿ ಸಂರಕ್ಷಣಾ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಿ.ವಿ.ಗಿರೀಶ್, ವನ್ಯಜೀವಿ ಸಂರಕ್ಷಣಾ ಕಾರ್ಯಕರ್ತ ಜಿ.ವೀರೇಶ್ ತಿಳಿಸಿದ್ದಾರೆ.