ಹೊಸಕೋಟೆ ತಂಡಕ್ಕೆ ಸಮಗ್ರ ಪ್ರಶಸ್ತಿ

ಸೋಮವಾರ, ಮೇ 20, 2019
30 °C

ಹೊಸಕೋಟೆ ತಂಡಕ್ಕೆ ಸಮಗ್ರ ಪ್ರಶಸ್ತಿ

Published:
Updated:
ಹೊಸಕೋಟೆ ತಂಡಕ್ಕೆ ಸಮಗ್ರ ಪ್ರಶಸ್ತಿ

ಹೊಸಕೋಟೆ: ಪಟ್ಟಣದ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ 14ರಿಂದ 17ರ ವಯೋಮಿತಿಯ ಬಾಲಕ– ಬಾಲಕಿಯರ ಅಥ್ಲೆಟಿಕ್ಸ್‌ನಲ್ಲಿ ಹೊಸಕೋಟೆ ತಾಲ್ಲೂಕು ತಂಡವು 79 ಅಂಕ ಕಲೆ ಹಾಕುವ ಮೂಲಕ ‘ಸಮಗ್ರ ತಂಡ’ ಪ್ರಶಸ್ತಿ ಪಡೆಯಿತು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ಈ ಕ್ರೀಡಾಕೂಟದ ಟ್ರಿಪಲ್ ಜಂಪ್, ಹರ್ಡಲ್ಸ್ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ಲಾಂಗ್ ಜಂಪ್‌ನಲ್ಲಿ ದ್ವಿತೀಯ ಸ್ಥಾನ ಗಳಿಸಿದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಶಿಲ್ಪಿ ಡೆ ಅವರು 17 ವಯೋಮಿತಿಯ ಬಾಲಕಿಯರ ವಿಭಾಗದ ವೈಯಕ್ತಿಕ ಪ್ರಶಸ್ತಿ ಪಡೆದರು. ಲಾಂಗ್ ಜಂಪ್, ಹೈಜಂಪ್ ಮತ್ತು ಟ್ರಿಪಲ್ ಜಂಪ್ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ದೊಡ್ಡಬಳ್ಳಾಪುರದ ಎಂ.ವಿ.ಗಗನ್ ಅವರು ಬಾಲಕರ ವಿಭಾಗದ ವೈಯಕ್ತಿಕ ಪ್ರಶಸ್ತಿ ಪಡೆದರು.

100 ಮೀ. ಓಟ, ಲಾಂಗ್ ಜಂಪ್ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು 200 ಮೀ. ಓಟದಲ್ಲಿ ತೃತೀಯ ಸ್ಥಾನ ಗಳಿಸಿದ ದೇವನಹಳ್ಳಿಯ ದರ್ಶನ್ ಗೌಡ ಅವರು 14 ವಯೋಮಿತಿಯ ಬಾಲಕರ ವಿಭಾಗದ ವೈಯಕ್ತಿಕ ಪ್ರಶಸ್ತಿ ಪಡೆದರು.

200 ಮೀ. ಮತ್ತು 600 ಮೀ. ಓಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ಹೊಸಕೋಟೆಯ ನಂದಿನಿ ಹಾಗೂ 100 ಮೀ. ಓಟ ಮತ್ತು ಲಾಂಗ್ ಜಂಪ್ ನಲ್ಲಿ ಪ್ರಥಮ ಸ್ಥಾನ ಗಳಿಸಿದ ದೊಡ್ಡಬಳ್ಳಾಪುರದ ಶ್ರೀಮಾತಾ ಅವರು 14 ವಯೋಮಿತಿಯ ವೈಯಕ್ತಿಕ ಪ್ರಶಸ್ತಿ ಹಂಚಿಕೊಂಡರು.

ನಗರಸಭೆ ಅಧ್ಯಕ್ಷ ಬಿ.ನಾರಾಯಣಸ್ವಾಮಿ ಕ್ರೀಡಾಕೂಟ ಉದ್ಘಾಟಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry