ಪ್ರವಾಸಕ್ಕೆ ತೆರಳಿದ್ದ ಸಂಕಲ್ಪ ಪದವಿ ಕಾಲೇಜಿನ ವಿದ್ಯಾರ್ಥಿ ಸಾವು

ಬುಧವಾರ, ಜೂನ್ 19, 2019
31 °C

ಪ್ರವಾಸಕ್ಕೆ ತೆರಳಿದ್ದ ಸಂಕಲ್ಪ ಪದವಿ ಕಾಲೇಜಿನ ವಿದ್ಯಾರ್ಥಿ ಸಾವು

Published:
Updated:

ಬಸವಕಲ್ಯಾಣ: ಪ್ರವಾಸಕ್ಕೆ ತೆರಳಿದ್ದ ಇಲ್ಲಿನ ಸಂಕಲ್ಪ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಲ್ಲೂಕಿನ ನಿರ್ಗುಡಿ ಗ್ರಾಮದ ಯೋಗೇಶ ವಿಜಯಕುಮಾರ ಶೇಡೋಳೆ (17) ಮೃತಪಟ್ಟವರು.

ಸೋಮವಾರ ಮಹಾರಾಷ್ಟ್ರದ ಅಕಲೂಜ್‌ನಲ್ಲಿನ ವಾಟರ್ ಪಾರ್ಕ್‌ಗೆ ಹೋಗಿದ್ದ ವೇಳೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತು ಆದ್ದರಿಂದ ವಿದ್ಯಾರ್ಥಿ ಕುಸಿದುಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಅಲ್ಲಿನ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಶವಪರೀಕ್ಷೆ ವರದಿ ಬಂದಾಗ ಮಾತ್ರ ಎಲ್ಲವೂ ಗೊತ್ತಾಗಲಿದೆ ಎಂದು ಮೃತನ ತಂದೆ ವಿಜಯಕುಮಾರ ಹೇಳಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry