ಸೇತುವೆ ಶಿಥಿಲ: ಪ್ರಯಾಣಿಕರಿಗೆ ಆತಂಕ

ಮಂಗಳವಾರ, ಜೂನ್ 25, 2019
25 °C

ಸೇತುವೆ ಶಿಥಿಲ: ಪ್ರಯಾಣಿಕರಿಗೆ ಆತಂಕ

Published:
Updated:
ಸೇತುವೆ ಶಿಥಿಲ: ಪ್ರಯಾಣಿಕರಿಗೆ ಆತಂಕ

ಔರಾದ್: ಬೀದರ್‌– ಔರಾದ್ ರಾಜ್ಯ ಹೆದ್ದಾರಿಯಲ್ಲಿನ ಬರುವ ಕೌಠಾ(ಬಿ) ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ಪ್ರಯಾಣಿಕರಲ್ಲಿ ಆತಂಕ ಮನೆಮಾಡಿದೆ. ಸೇತುವೆ ಒಂದು ಭಾಗದ ತಡೆಗೋಡೆ ಕುಸಿದಿದ್ದು, ಜನರಿಗೆ ಆತಂಕ ಶುರುವಾಗಿದೆ. ಸಾಮಾಜಿಕ ಹೋರಾಟಗಾರ ಗುರುನಾಥ ವಡ್ಡೆ ಅವರು ಸೇತುವೆಯ ಸ್ಥಿತಿಗತಿ ಕುರಿತು ಸರ್ಕಾರಕ್ಕೆ ಮಾಹಿತಿ ಸಲ್ಲಿಸಿದ್ದಾರೆ.

‘ನಾಲ್ಕು ದಶಕದ ಹಿಂದೆ ಮಾಂಜ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಕೌಠಾ ಸೇತುವೆ ಒಂದೊಂದು ಭಾಗ ಕುಸಿಯುವ ಹಂತಕ್ಕೆ ತಲುಪಿದೆ. ಯಾವುದೇ ಸಮಯದಲ್ಲಿ ಅಪಾಯ ಸಂಭವಿಸಬಹುದು. ಹೊಸ ಸೇತುವೆ ನಿರ್ಮಾಣವಾಗುವ ತನಕ ಪರ್ಯಾಯ ವ್ಯವಸ್ಥೆ ಮಾಡುವುದು ಸೂಕ್ತ’ ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಬೀದರ್‌– ಔರಾದ್ ರಸ್ತೆ ಮೂರು ರಾಜ್ಯಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಸಿಖ್ ಯಾತ್ರಿಕರ ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತವೆ. 50ರಿಂದ 60 ಟನ್ ಭಾರದ ಮರಳು ಸಾಗಿಸುವ ಲಾರಿಗಳ ಓಡಾಟ ಇಲ್ಲಿ ಸಾಮಾನ್ಯವಾಗಿದೆ. ಕೇಂದ್ರ ಸರ್ಕಾರ ಈ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿಸಲು ತಾತ್ವಿಕ ಅನುಮೋದನೆ ನೀಡಿದೆ. ಆದರೆ ರಸ್ತೆಯ ಸ್ಥಿತಿ ಮಾತ್ರ ಶೋಚನೀಯವಾಗಿದೆ.

ಬೀದರ್‌– ಔರಾದ್‌ ನಡುವಿನ ಅಂತರ 40 ಕಿ.ಮೀ. ಇದರಲ್ಲಿ 20 ಕಿ.ಮೀ. ರಸ್ತೆ ಹಾಳಾಗಿದೆ. ಗುಂಡಿಗಳ ನಡುವೆ ರಸ್ತೆ ಹುಡುಕಬೇಕಾದ ಪರಿಸ್ಥಿತಿ ಇದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ. ರಸ್ತೆ ಅಭಿವೃದ್ಧಿಪಡಿಸಬೆಕಾದವರು ಕಾಳಜಿ ವಹಿಸದೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry