ಮೃತ ರೈತನ ಕುಟುಂಬಕ್ಕೆ ಪರಿಹಾರ ವಿತರಣೆ

ಮಂಗಳವಾರ, ಜೂನ್ 18, 2019
26 °C

ಮೃತ ರೈತನ ಕುಟುಂಬಕ್ಕೆ ಪರಿಹಾರ ವಿತರಣೆ

Published:
Updated:

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿ ಹೋಬಳಿಯ ರಾಯನಕಲ್ಲು ಗ್ರಾಮದಲ್ಲಿ ಕರಡಿಗಳ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಇತ್ತೀಚೆಗೆ ಮೃತಪಟ್ಟ ರೈತ ಕೇಶವಪ್ಪ ಅವರ ಕುಟುಂಬಕ್ಕೆ ಅರಣ್ಯ ಇಲಾಖೆ ನೀಡಿದ ₹ 5 ಲಕ್ಷ ಪರಿಹಾರದ ಚೆಕ್‌ನ್ನು ಬುಧವಾರ ಶಾಸಕ ಡಾ.ಕೆ.ಸುಧಾಕರ್‌ ಮೃತರ ಕುಟುಂಬದವರಿಗೆ ವಿತರಿಸಿದರು.

ಕೇಶವಪ್ಪ ಅವರ ಮೃತದೇಹದ ಅಂತಿಮ ದರ್ಶನ ಮಾಡಿದ ಸುಧಾಕರ್‌ ಅವರು, ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಅವರು ಗ್ರಾಮಕ್ಕೆ ‘ನಿರಂತರ ಜ್ಯೋತಿ’ ಯೋಜನೆ ಸಂಪರ್ಕ ಕೊಡಿಸುವ ಭರವಸೆ ನೀಡಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮಂಜುನಾಥ್, ಜಿಲ್ಲಾ ಪಂಚಾಯಿತಿ ಸದಸ್ಯ ಪ್ರಕಾಶ್, ತಾಲ್ಲೂಕು ಪಂಚಾಯಿತಿ ಸದಸ್ಯ ಬಾಲಕೃಷ್ಣ, ಮುಖಂಡರಾದ ವೆಂಕಟೇಶ್, ಬೈರರೆಡ್ಡಿ, ಅಪ್ಪಿಗೌಡ, ವಿರೂಪಾಕ್ಷಗೌಡ, ಗಂಗಾಧರ್ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry