‘ಬಗರ್‌ಹುಕುಂ: ಅರ್ಜಿ ಸಲ್ಲಿಸಲು ಅವಕಾಶ ನೀಡಿ’

ಗುರುವಾರ , ಜೂನ್ 20, 2019
30 °C

‘ಬಗರ್‌ಹುಕುಂ: ಅರ್ಜಿ ಸಲ್ಲಿಸಲು ಅವಕಾಶ ನೀಡಿ’

Published:
Updated:

ಹರಪನಹಳ್ಳಿ: ಬಗರಹುಕುಂ ಸಾಗುವಳಿ ರೈತರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಮುಖಂಡ ರಾಜಪ್ಪ ಮಾತನಾಡಿ, ‘ತಾಲ್ಲೂಕಿನಲ್ಲಿ ಆರು ಸಾವಿರಕ್ಕೂ ಹೆಚ್ಚು ಬಗರ್‌ಹುಕುಂ ಸಾಗುವಳಿದಾರರು ಇದ್ದಾರೆ. ಅವರ ಪೈಕಿ 2,300 ಅರ್ಜಿದಾರರ ಸಮಸ್ಯೆಗಳನ್ನು ಇತ್ಯರ್ಥಪಡಿಸಿದ್ದು ಉಳಿದ ಅರ್ಜಿಗಳನ್ನು ನಾನಾ ಕಾರಣಗಳನ್ನು ನೀಡಿ ತಿರಸ್ಕರಿಸಿದ್ದಾರೆ.

1998ರಿಂದ ಸಾಗುವಳಿ ಮಾಡಿಕೊಂಡು ಬಂದಿರುವ ರೈತರಿಗೆ ಸರ್ಕಾರ ಹಕ್ಕು ಪತ್ರ ವಿತರಿಸಲು ಮಾನದಂಡ ರೂಪಿಸಿದೆ. ಆದರೆ, ಅದಕ್ಕೂ ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬಂದಿರುವ ರೈತರನ್ನು ಪರಿಗಣಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ರೈತರಿಗೆ ಹೊಸದಾಗಿ ಅರ್ಜಿಸಲ್ಲಿಸಲು ಅವಕಾಶ ಕಲ್ಪಿಸಿ ಅವರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು. ಇದೇವೇಳೆ, ತಹಶೀಲ್ದಾರ್‌ ಕೆ.ಗುರುಬಸವರಾಜ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು. ವಿವಿಧ ಗ್ರಾಮಗಳಿಂದ ಬುತ್ತಿ ತಂದಿದ್ದ ರೈತ ಮಹಿಳೆಯರು ಊಟ ಮಾಡಿದರು. ಮುಖಂಡ ಕುದರಿ ನಾಗರಾಜ್‌ ಅವರೂ ಭಾಗವಹಿಸಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry