ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಸರ ಉಳಿಸಿ, ಬೆಳೆಸಲು ಕರೆ

Last Updated 13 ಅಕ್ಟೋಬರ್ 2017, 6:47 IST
ಅಕ್ಷರ ಗಾತ್ರ

ಹಾಸನ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಲ್ಲಿ ಶಿಸ್ತು, ಸಂಯಮ, ಸಾಮಾಜಿಕ ಕಳಕಳಿಯ ಜತೆಗೆ ಉತ್ತಮ ಆದರ್ಶ ಕಲಿಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಜಂಟಿ ಕಾರ್ಯದರ್ಶಿ ಕಾಂಚನಮಾಲ ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹಾಗೂ ಏಕಲವ್ಯ ಮುಕ್ತ ರೋವರ್ಸ್‌ ದಳದ ಆಶ್ರಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಜಿಲ್ಲಾ ಕ್ರೀಡಾಂಗಣದ ಸುತ್ತ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಂಸ್ಥೆ ಜಾಗತಿಕವಾಗಿ ಸುಮಾರು 216 ರಾಷ್ಟ್ರಗಳಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಶ್ರೇಯೋಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಸಮಾಜ ಅಥವಾ ಪ್ರಕೃತಿ ನಮಗೇನು ನೀಡಿದೆ ಎನ್ನುವುದಕ್ಕಿಂತ, ಪ್ರಕೃತಿಯಿಂದ ಬಂದ ನಾವು, ಸಮಾಜದಿಂದ ಕಲಿತ ನಾವು ಏನು ನೀಡಿದ್ದೇವೆ ಎಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಪರಿಸರ ಉಳಿಸಿ ಬೆಳಸಬೇಕು ಎಂದರು.

ಏಕಲವ್ಯ ಮುಕ್ತದಳದ ನಾಯಕ ಆರ್.ಜಿ. ಗಿರೀಶ್, ರೇಂಜರ್ ಭೂಮಿಕ, ರೋವರ ಗಿರೀಶ್ ಸೇರಿದಂತೆ ಕಲಾ ಕಲೇಜಿನ ಹಾಸನಾಂಬ ರೇಂಜರ್ಸ್‌ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿ 200 ಕ್ಕೂ ಹೆಚ್ಚು ಗಿಡಗಳನ್ನು ನೆಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT