ರೈಲು ಹಳಿ ಪಕ್ಕದ 46 ಮರ ಸ್ಥಳಾಂತರ

ಗುರುವಾರ , ಜೂನ್ 20, 2019
26 °C

ರೈಲು ಹಳಿ ಪಕ್ಕದ 46 ಮರ ಸ್ಥಳಾಂತರ

Published:
Updated:

ಹುಬ್ಬಳ್ಳಿ: ಚಿಕ್ಕಜಾಜೂರು–ಹುಬ್ಬಳ್ಳಿ ಮಧ್ಯೆ ನಿರ್ಮಾಣವಾಗುತ್ತಿರುವ ಜೋಡಿ ರೈಲು ಮಾರ್ಗ ಕಾಮಗಾರಿಗಾಗಿ ನೆಲಕ್ಕುರುಳಬೇಕಿದ್ದ 46 ಮರಗಳನ್ನು ನೈರುತ್ಯ ರೈಲ್ವೆ ಸುರಕ್ಷಿತವಾಗಿ ಬೇರೆಡೆ ಸ್ಥಳಾಂತರಿಸಿದೆ.

ಹಾವೇರಿ ಜಿಲ್ಲೆ ದೇವರಗುಡ್ಡ ರೈಲು ನಿಲ್ದಾಣದ ಸಮೀಪದಲ್ಲಿ ಹಾದು ಹೋಗುವ ಜೋಡಿ ಮಾರ್ಗಕ್ಕಾಗಿ ಹಲವು ಮರಗಳನ್ನು ರೈಲ್ವೆ ಇಲಾಖೆ ತೆರವುಗೊಳಿಸಬೇಕಿತ್ತು. ಆದರೆ, ಜೆಸಿಬಿ ಯಂತ್ರಗಳನ್ನು ಬಳಸಿ ಬೇರುಸಹಿತ ಕಿತ್ತು, ಬೇರೆಡೆ ತಗ್ಗು ತೋಡಿ ನೆಡಲಾಗಿದೆ.

ಜೋಡಿ ಮಾರ್ಗ ನಿರ್ಮಾಣವಾಗುವ ಸ್ಥಳದಿಂದ ಸ್ವಲ್ಪ ದೂರದಲ್ಲಿ ಈ ಮರಗಳನ್ನು ನೆಡಲಾಗಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಇ.ವಿಜಯಾ ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry