ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ವಿವಾದ : ಸಂವಿಧಾನ ಪೀಠಕ್ಕೆ ಅರ್ಜಿ ವರ್ಗಾಯಿಸಿದ ಸುಪ್ರೀಂಕೋರ್ಟ್

Last Updated 13 ಅಕ್ಟೋಬರ್ 2017, 14:01 IST
ಅಕ್ಷರ ಗಾತ್ರ

ನವದೆಹಲಿ: ಮಹಿಳೆಯರು ಶಬರಿಮಲೆ ದೇಗುಲ ಪ್ರವೇಶಕ್ಕೆ ನಿರ್ಬಂಧ ಹೇರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ  ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ವಿಷಯವನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ. ಐವರು ನ್ಯಾಯಾಧೀಶರ ನ್ಯಾಯಾಪೀಠವು ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ.


ದೇಗುಲಕ್ಕೆ ಸ್ತ್ರೀಯರಿಗೆ ಪ್ರವೇಶ ನಿರ್ಬಂಧ ಹೇರಿರುವುದರ ಮೂಲಕ ಮಹಿಳಾ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು. ಅದೇ ವೇಳೆ ದೇಗುಲ ಪ್ರವೇಶದ ನಿಯಮಗಳ ಬಗ್ಗೆಯೂ ನ್ಯಾಯಪೀಠ ಪರಿಶೀಲನೆ ನಡೆಸಲಿದೆ. ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠವು ಈ ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತಾದ ಅರ್ಜಿಯನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ.

ಶಬರಿ ಮಲೆಯಲ್ಲಿ 10ಕ್ಕಿಂತ ಕಡಿಮೆ ಮತ್ತು 50 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ಮಹಿಳೆಯರಿಗೆ ಮಾತ್ರ ಪ್ರವೇಶವಿದೆ. ಇನ್ನುಳಿದ ಮಹಿಳೆಯರಿಗೆ ದೇಗುಲ ಪ್ರವೇಶ ನಿಷಿದ್ಧ. ಆದಾಗ್ಯೂ, ಹೆಣ್ಣಿನ ಮುಟ್ಟಿನ ಸಮಸ್ಯೆ ಕಾರಣದಿಂದಾಗಿ ಮಹಿಳೆಯರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ದೇಗುಲದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿತ್ತು. ಆದರೆ ಎಲ್ಲ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನೀಡಲೇಬೇಕೆಂದು ಒತ್ತಾಯಿಸಿ ಮಹಿಳಾ ಸಂಘಟನೆಗಳು ಕೋರ್ಟ್ ಮೆಟ್ಟಲೇರಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT