ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆನಿಸ್: ಶರಪೋವಾ–ಪೆಂಗ್ ಪೈಪೋಟಿ

Last Updated 13 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ತಿಯಾಂಜಿನ್: ರಷ್ಯಾದ ಮರಿಯಾ ಶರಪೋವಾ ತಿಯಾಂಜಿನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಶುಕ್ರವಾರ ಸೆಮಿಫೈನಲ್ ತಲುಪಿದ್ದಾರೆ.

ಮಹಿಳೆಯರ ಸಿಂಗಲ್ಸ್ ವಿಭಾಗದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಶರ ಪೋವಾ 6–3, 6–1ರಲ್ಲಿ ಸ್ಟೆಫಾನಿ ವೋಗೆಲೆ ಅವರನ್ನು ಮಣಿಸಿದರು. ಮುಂದಿನ ಪಂದ್ಯದಲ್ಲಿ ಅವರು ಚೀನಾದ ಆಟಗಾರ್ತಿ ಪೆಂಗ್ ಶುಯಿ ಅವರನ್ನು ಎದುರಿಸಲಿದ್ದಾರೆ.

30 ವರ್ಷದ ಆಟಗಾರ್ತಿ ಶರ ಪೋವಾ ವಿಶ್ವ ರ‍್ಯಾಂಕಿಂಗ್‌ನಲ್ಲಿ 86ನೇ ಸ್ಥಾನದಲ್ಲಿ ಇದ್ದಾರೆ. ಈ ಟೂರ್ನಿಯಲ್ಲಿ ಅವರಿಗೆ ವೈಲ್ಡ್ ಕಾರ್ಡ್ ಪ್ರವೇಶ ಸಿಕ್ಕಿತ್ತು.

ಇನ್ನೊಂದು ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಪೆಂಗ್‌ 6–0, 6–1ರಲ್ಲಿ ಸ್ಪೇನ್‌ನ ಸಾರಾ ಸೊರಿಬೆಸ್‌ ಎದುರು ಗೆದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT