ಶೂ ಒಳಗಡೆ ಚಿನ್ನ ಕಳ್ಳಸಾಗಣೆ: ನಾಲ್ವರ ಬಂಧನ

ಮಂಗಳವಾರ, ಜೂನ್ 25, 2019
27 °C

ಶೂ ಒಳಗಡೆ ಚಿನ್ನ ಕಳ್ಳಸಾಗಣೆ: ನಾಲ್ವರ ಬಂಧನ

Published:
Updated:

ಮಂಗಳೂರು: ದುಬೈನಿಂದ ಶೂ ಒಳಗಡೆ ಚಿನ್ನ ಕಳ್ಳಸಾಗಣೆಗೆ ಯತ್ನಿಸಿದ ನಾಲ್ವರನ್ನು ಶುಕ್ರವಾರ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು, 1.93 ಕೆ.ಜಿ. ತೂಕದ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ.

‘ಶುಕ್ರವಾರ ಬೆಳಗ್ಗಿನ ಜಾವ 4.30ಕ್ಕೆ ದುಬೈನಿಂದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಎಲ್ಲ ಪ್ರಯಾಣಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಯಿತು. ನಾಲ್ವರು ಪ್ರಯಾಣಿಕರು ಬೃಹತ್‌ ಗಾತ್ರದ ಶೂಗಳನ್ನು ಧರಿಸಿರುವುದು ಕಂಡುಬಂತು. ಅನುಮಾನದ ಮೇಲೆ ಅವರನ್ನು ವಶಕ್ಕೆ ಪಡೆದು ತಪಾಸಣೆ ಮಾಡಿದಾಗಶೂಗಳ ಸೋಲ್‌ ಅಡಿಯಲ್ಲಿ ಚಿನ್ನದ ಗಟ್ಟಿಗಳನ್ನು ಅಡಗಿಸಿ ಇಟ್ಟಿರುವುದು ಪತ್ತೆಯಾಯಿತು. ಆರೋಪಿಗಳಿಂದ ಒಟ್ಟು ₹ 57.5 ಲಕ್ಷ ಮೌಲ್ಯದ 24 ಕ್ಯಾರಟ್‌ ಗುಣಮಟ್ಟದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಡಿಆರ್‌ಐ ಮಂಗಳೂರು ಕಚೇರಿಯ ಉಪ ಆಯುಕ್ತ ವಿನಾಯಕ ಭಟ್‌ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry