ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇವದಾಸಿಯರ ಸ್ಥಿತಿಗತಿ ಅಧ್ಯಯನಕ್ಕೆ ಸಮಿತಿ’

Last Updated 13 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಕಲಬುರ್ಗಿ: ‘ರಾಜ್ಯದ 14 ಜಿಲ್ಲೆಗಳಲ್ಲಿ ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದ್ದು, ದೇವದಾಸಿಯರ ಸ್ಥಿತಿಗತಿ ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಲಾಗುವುದು’ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಬಾಯಿ ಹೇಳಿದರು.

‘ದೇವದಾಸಿ ಪದ್ಧತಿ ನಿರ್ಮೂಲನೆಗೆ ಶ್ರಮಿಸಿದವರ ಅಧ್ಯಕ್ಷತೆಯಲ್ಲಿ ರಚನೆಯಾಗಲಿರುವ ಈ ಸಮಿತಿಯಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಇರಲಿದ್ದಾರೆ’ ಎಂದು ಶುಕ್ರವಾರ ಇಲ್ಲಿ ತಿಳಿಸಿದರು.

‘ಹೆಣ್ಣುಮಕ್ಕಳಿಗೆ ಅಷ್ಟೇ ಅಲ್ಲ, ಗಂಡು ಮಕ್ಕಳಿಗೂ ಮುತ್ತು ಕಟ್ಟುವ ಪರಿಪಾಠ ಬೆಳೆದಿದೆ. ಇದು ವೇಶ್ಯಾವಾಟಿಕೆಯ ಇನ್ನೊಂದು ರೂಪ. ಇದು ಮುಂಬಯಿ ಕೆಂಪುದೀಪ ಪ್ರದೇಶಕ್ಕೆ ರಹದಾರಿಯೂ ಆಗಿದೆ’ ಎಂದು ಹೇಳಿದರು.

‘ವರದಿ ಪಡೆದು ಆಯಾ ಜಿಲ್ಲೆಗಳಲ್ಲಿ ದೇವದಾಸಿಯರ ಪುನರ್ವಸತಿ ಕೇಂದ್ರ ಸ್ಥಾಪಿಸುವುದು ಮತ್ತು ಇತರೆ ಸೌಲಭ್ಯ ಕಲ್ಪಿಸಲು ಸರ್ಕಾರದ ಮೇಲೆ ಒತ್ತಡ ತರಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT