ಗ್ರಾಮಾಭಿವೃದ್ಧಿಗೆ ಹೆಚ್ಚಿನ ಆದ್ಯತೆ: ರಮೇಶ ಜಾರಕಿಹೊಳಿ

ಸೋಮವಾರ, ಜೂನ್ 17, 2019
27 °C

ಗ್ರಾಮಾಭಿವೃದ್ಧಿಗೆ ಹೆಚ್ಚಿನ ಆದ್ಯತೆ: ರಮೇಶ ಜಾರಕಿಹೊಳಿ

Published:
Updated:

ಘಟಪ್ರಭಾ: ಇಲ್ಲಿಗೆ ಸಮೀಪದ ಮಲ್ಲಾಪೂರ ಪಿ.ಜಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಡಿ.ಎಂ.ದಳವಾಯಿ ಅವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸತ್ಕರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಗ್ರಾಮಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ಈ ನಿಟ್ಟಿನಲ್ಲಿ ವಿವಿಧ ಯೋಜನೆಗಳ ಅಡಿ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಇನ್ನೂ ಹೆಚ್ಚಿನ ಅನುದಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ ಎಂದರು.

ಪಟ್ಟಣ ಪಂಚಾಯ್ತಿ ಸದಸ್ಯರಾದ ಸಲೀಂ ಕಬ್ಬೂರ, ನಾಗರಾಜ ಚಚಡಿ, ಇಮ್ರಾನ್ ಬಟಕುರ್ಕಿ, ಗಂಗಾಧರ ಬಡಕುಂದ್ರಿ, ರಾಮಣ್ಣ ನಾಯಿಕ, ವಿಕ್ರಮ ದಳವಾಯಿ, ಗ್ರಾಮದ ಹಿರಿಯರಾದ ಸುಭಾಸ ಹುಕ್ಕೇರಿ, ಪ್ರಕಾಶ ಡಾಂಗೆ, ಸುರೇಶ ಪೂಜೇರಿ, ಶೇಖರ ಕುಲಗೋಡ, ಬೀರಪ್ಪ ಡಬಾಜ, ಧುಪದಾಳ ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಸ್.ಐ.ಬೆನವಾಡಿ, ಸದಸ್ಯ ನಾಗರಾಜ ನಾಯಿಕ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry