ಅಕ್ಕಿಆಲೂರಿನಲ್ಲಿ ಉತ್ತಮ ಮಳೆ

ಗುರುವಾರ , ಜೂನ್ 20, 2019
30 °C

ಅಕ್ಕಿಆಲೂರಿನಲ್ಲಿ ಉತ್ತಮ ಮಳೆ

Published:
Updated:
ಅಕ್ಕಿಆಲೂರಿನಲ್ಲಿ ಉತ್ತಮ ಮಳೆ

ಅಕ್ಕಿಆಲೂರ: ಶುಕ್ರವಾರ ಸಂಜೆ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಉತ್ತಮ ಮಳೆ ಸುರಿಯಿತು. ಇದರಿಂದ ರಸ್ತೆಗಳೆಲ್ಲ ಜಾಲಾವೃತಗೊಂಡು ಸಂಚಾರ ಅಸ್ತವ್ಯಸ್ತವಾಯಿತು.

ಗುರುವಾರ ಸಂಜೆಯಷ್ಟೆ ಭಾರಿ ಮಳೆ ಸುರಿದು ರಸ್ತೆಗಳಲ್ಲಿ ನೀರು ನಿಂತಿತ್ತು. ಶುಕ್ರವಾರ ಮಳೆ ನೀರೂ ಅದರೊಂದಿಗೆ ಸೇರಿಕೊಂಡು ವಾಹನಗಳ ಸಂಚಾರಕ್ಕೆ ಅಡ್ಡಿಯುಂಟು ಮಾಡಿತು. ಬಸ್ ನಿಲ್ದಾಣದ ಬಳಿಯ ಸಪ್ತಗಿರಿ ಹೋಟೆಲ್ ಮುಂಭಾಗದಲ್ಲಿ ಎರಡೂವರೆ ಅಡಿಯಷ್ಟು ನೀರು ಹರಿಯಿತು.

‘ಶಿರಸಿ–ಮೊಣಕಾಲ್ಮೂರು ರಾಜ್ಯ ಹೆದ್ದಾರಿ ವಿಸ್ತರಣೆ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ಕೈಗೊಂಡ ಹಿನ್ನೆಲೆಯಲ್ಲಿ ಮಳೆ ಸುರಿದಾಗಲೆಲ್ಲಾ ರಸ್ತೆಯಲ್ಲಿ ನೀರು ನಿಲ್ಲುವಂತಾಗಿದೆ’ ಎಂದು ಸ್ಥಳೀಯರು ದೂರಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry