ಕಾಂಗ್ರೆಸ್‌ ಕಾರ್ಯಕರ್ತರಿಗೂ ಭಾಗ್ಯ ಬರಲಿದೆ

ಮಂಗಳವಾರ, ಜೂನ್ 18, 2019
24 °C

ಕಾಂಗ್ರೆಸ್‌ ಕಾರ್ಯಕರ್ತರಿಗೂ ಭಾಗ್ಯ ಬರಲಿದೆ

Published:
Updated:
ಕಾಂಗ್ರೆಸ್‌ ಕಾರ್ಯಕರ್ತರಿಗೂ ಭಾಗ್ಯ ಬರಲಿದೆ

ನವಲಗುಂದ: ‘ಕಾರ್ಯಕರ್ತರು ಹಗಲು–ರಾತ್ರಿ ದುಡಿಯುತ್ತಿದ್ದರೂ ಪಕ್ಷ ನಮಗೇನು ಮಾಡಿದೆ ಎಂಬ ಭಾವನೆ ಎಲ್ಲರಲ್ಲಿ ಇದೆ. ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೂ ಭಾಗ್ಯ ಬರಲಿದೆ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಲ್ಕಿಷ್ ಬಾನು ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ‘ಪ್ರತಿ ಬೂತ್ ಮಟ್ಟದಲ್ಲಿ ಮನೆ ಮನೆಗೆ ಕಾಂಗ್ರೆಸ್ ಕೈಪಿಡಿಯನ್ನು ಎಷ್ಟರ ಮಟ್ಟಿಗೆ ಮುಟ್ಟಿಸಲಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆದಿದ್ದೇನೆ. ಕಾರ್ಯಕರ್ತರು ಚೆನ್ನಾಗಿ ಕೆಲಸ ಮಾಡಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಜಿಲ್ಲೆಯಲ್ಲಿ ಕಾಂಗ್ರೆಸ್ ಭವನ ಇರುವ ಏಕೈಕ ಕ್ಷೇತ್ರ ನವಲಗುಂದ. ಈ ಕಟ್ಟಡ ನಿರ್ಮಾಣಕ್ಕೆ ಶ್ರಮಿಸಿದ ಪೂರ್ವಜರನ್ನು ಸ್ಮರಿಸಬೇಕು. ಕಳೆದ ಚುನಾವಣೆಯಲ್ಲಿ ಈ ಕ್ಷೇತ್ರವನ್ನು ಪಕ್ಷ ಕಳೆದುಕೊಂಡಿದ್ದಕ್ಕೆ ದುರಾದೃಷ್ಟಕರ.

ಇದು ವೈಯಕ್ತಿಕವಾಗಿ ನನಗೆ ಬಹಳ ನೋವಾಗಿದೆ. ಮಾಜಿ ಸಚಿವ ಕೆ.ಎನ್. ಗಡ್ಡಿಯವರಿಗೆ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಮೇಲಿನ ಅಭಿಮಾನದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಮೂಲಕ ಹಲವಾರು ಯೋಜನೆಗಳನ್ನು ಕ್ಷೇತ್ರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ’ ಎಂದು ತಿಳಿಸಿದರು.

ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಎಚ್‌.ವಿ. ಮಾಡಳ್ಳಿ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಸುಭಾಸ ಜಾಯಗೋಳ, ಮಾಜಿ ಸಚಿವ ಕೆ.ಎನ್.ಗಡ್ಡಿ, ರಾಜಶೇಖರ ಮೆಣಸಿನಕಾಯಿ, ವರ್ಧಮಾನಗೌಡ ಹಿರೇಗೌಡರ, ಪ್ರಕಾಶ ಅಂಗಡಿ, ಪುರಸಭೆ ಅಧ್ಯಕ್ಷೆ ಅನಸೂಯಾ ಭೋವಿ, ಉಪಾಧ್ಯಕ್ಷೆ ಶೋಭಾ ಗುಡಾರದ, ವಿ.ಪಿ.ಪಾಟೀಲ, ಮಹಿಳಾ ಘಟಕದ ಅಧ್ಯಕ್ಷೆ ಮುಕ್ತಾ ಬೆಟಸೂರ, ಜಿಲ್ಲಾ ಪಂಚಾಯ್ತಿ ಸದಸ್ಯ ಗಾಯತ್ರಿ ರಾಯರಡ್ಡಿ, ಪುರಸಭೆ, ತಾಲ್ಲೂಕಾ ಪಂಚಾಯ್ತಿ ಸದಸ್ಯರು ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry