ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಂಬಿಗ ಸಮುದಾಯ ಎಸ್ಟಿಗೆ ಸೇರಿಸಲು ಒಗಟ್ಟು ಪ್ರದರ್ಶಿಸಿ’

Last Updated 14 ಅಕ್ಟೋಬರ್ 2017, 7:29 IST
ಅಕ್ಷರ ಗಾತ್ರ

ಗೋಕರ್ಣ: ಅಂಬಿಗ ಸಮುದಾಯದ ಯುವಕರು ಇತರೇ ಮೀನುಗಾರ ಸಮುದಾಯದವರನ್ನೂ ಒಗ್ಗೂಡಿಸಿಕೊಂಡು ಸಂಘಟಿತರಾಗಿ ತಮ್ಮ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಲ್ಲಿ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಹೇಳಿದರು.

ಶ್ರೀಗಂಗಾ ಮಾತಾ ದೇವಸ್ಥಾನ ಆಡಳಿತ ಸಮಿತಿ ಹಾಗೂ ಗಂಗಾವಳಿಯ ವಿರಾಟ ಹಿಂದೂ ಯುವಕ ಸಂಘದ ಆಶ್ರಯದಲ್ಲಿ ಬುಧವಾರ ನಡೆದ ಶ್ರೀಗಂಗಾಷ್ಟಮಿ ಉತ್ಸವದಲ್ಲಿ ಮಾತನಾಡಿದರು.

‘ಎಲ್ಲ ಮೀನುಗಾರ ಸಮುದಾಯದವರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ಹಾಲಕ್ಕಿ ಸಮಾಜವನ್ನೂ ಕೂಡ ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತಾಗಬೇಕು. ಆಗ ಮಾತ್ರ ಹಿಂದುಳಿದ ವಿದ್ಯಾರ್ಥಿಗಳೆಲ್ಲರೂ ಮುಖ್ಯವಾಹಿನಿಗೆ ಬರಲು ಸಾಧ್ಯ’ ಎಂದು ಎಂದರು.

ಶಾಸಕಿ ಶಾರದಾ ಶೆಟ್ಟಿ ಮಾತನಾಡಿ, ‘ಮೀನುಗಾರರೇ ಹೆಚ್ಚಾಗಿರುವ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಮುಂದಿನ ದಿನಗಳಲ್ಲೂ ಈ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತೇನೆ’ ಎಂದು ಭರವಸೆ ನೀಡಿದರು.

ಜಿಲ್ಲಾ ಪಂಚಾಯ್ತಿ ಸದಸ್ಯ ಪ್ರದೀಪ ನಾಯಕ ದೇವರಭಾವಿ, ಶ್ರೀಶ್ರೀಶಾಂತ ಭೀಷ್ಮ ಚೌಡಯ್ಯ ಮಹಾಸ್ವಾಮೀಜಿ ಹಾಗೂ ಶ್ರೀಮಹಾದೇವ ಅಂಬಿಗ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಭೀಮಣ್ಣ ಸಾಲಿ, ರಾಜಗೋಪಾಲ ರೆಡ್ಡಿ, ಗಾಯತ್ರಿ ಗೌಡ, ರಾಜೇಶ ನಾಯಕ, ಶ್ರೀನಿವಾಸ ದೇವಣ್ಣ ನಾಯಕ, ಗಣಪತಿ ಅಂಬಿಗ, ನಾಗಪ್ಪ ಅಂಬಿಗ, ಎಚ್.ಎಂ.ದಂಡಿನ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT