ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡೆ ವಿದ್ಯಾರ್ಜನೆಗೆ ಪೂರಕ: ಸಚಿವ ಖಾದರ್

Last Updated 14 ಅಕ್ಟೋಬರ್ 2017, 8:41 IST
ಅಕ್ಷರ ಗಾತ್ರ

ಮಂಗಳೂರು: ಕ್ರೀಡೆಯು ವಿದಾರ್ಥಿಗಳ ಜೀವನದಲ್ಲಿ ಮಹತ್ವವಾದ ಅಂಗ. ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಕ್ರೀಡೆಯಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಹೇಳಿದರು. ನಗರದ ಮಂಗಳಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಒಳ್ಳೆಯ ಆರೋಗ್ಯವಿದ್ದಾಗ ಮಾತ್ರ ಉತ್ತಮ ಅಂಕ ಪಡೆದು ಸಾಧನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಕ್ರೀಡಾಸ್ಫೂರ್ತಿ ನೀಡುವ ಮೂಲಕ ಆರೋಗ್ಯವಂತ ವಿದ್ಯಾರ್ಥಿಗಳನ್ನು ರೂಪಿಸುತ್ತಿದೆ ಎಂದರು.

ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್‍ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ಉಪಾಧ್ಯಕ್ಷೆ ಉಷಾಪ್ರಭಾ ಎನ್.ನಾಯಕ್, ಸಂಸ್ಥೆ ಟ್ರಸ್ಟಿ ಉಸ್ತಾದ್ ರಫೀಕ್ ಖಾನ್, ಕಾಲೇಜಿನ ಹಳೆಯ ವಿದ್ಯಾರ್ಥಿಯಾದ ಅಂಕುಶ್ ಎನ್.ನಾಯಕ್, ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ, ಪ್ರಾಂಶುಪಾಲ ಪ್ರೊ. ರಾಮಚಂದ್ರ ಭಟ್, ಕ್ರೀಡಾ ಸಂಯೋಜಕ ಪ್ರಮೋದ್ ಕಿಣಿ ಇದ್ದರು. ಉಪನ್ಯಾಸಕಿ ಝೀಟಾ ಡಿಸೋಜ ನಿರೂಪಿಸಿ, ವಂದಿಸಿದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಲೆಕ್ಕ ಪರಿಶೋಧಕ ಜಗನ್ನಾಥ್ ಕಾಮತ್, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ಬಾಲಕಿಯರ ವಿಭಾಗದಲ್ಲಿ ವೈಯಕ್ತಿಕ ಚಾಂಪಿಯನ್‌ಷಿಪ್‌ ಅನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವೈಶಾಲಿ ಕೆ.ಎಸ್., ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಫಾಝಿಲ್ ಅಲಿ ಪಡೆದರು. ಸಮಗ್ರ ಪ್ರಶಸ್ತಿಯನ್ನು ಪ್ರಥಮ ಪಿಯುಸಿ ‘ಜಿ’ ವಿಭಾಗದ ವಿದ್ಯಾರ್ಥಿಗಳು ಪಡೆದರು. ಪಥ ಸಂಚಲನ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ಮೂರನೇ ವಿಭಾಗದ ವಿದ್ಯಾರ್ಥಿಗಳು ವಿಶೇಷ ಬಹುಮಾನ ಪಡೆದರು. ವಿಜೇತ ವಿದ್ಯಾರ್ಥಿಗಳಿಗೆ ಚಿನ್ನ, ಬೆಳ್ಳಿ, ಕಂಚು ಪದಕಗಳನ್ನು ನೀಡಿ ಗೌರವಿಸಲಾಯಿತು.

ಕನ್ನಡ ವಿಭಾಗದ ಮುಖ್ಯಸ್ಥ ಕರುಣಾಕರ ಬಳ್ಕೂರು ಉಪಸ್ಥಿತರಿದ್ದರು. ಉಪನ್ಯಾಸಕಿ ನೀಹಾ ಅಬ್ದುಲ್ ಶೇಖ್ ನಿರೂಪಿಸಿದರು. ಕ್ರೀಡಾ ಸಂಯೋಜಕ ಪ್ರಮೋದ್ ಕಿಣಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT