ರಾಹುಲ್‌ ನಾಯಕತ್ವದಿಂದ 2019ರ ಚುನಾವಣೆಯಲ್ಲಿ ಕಾಂಗ್ರೆಸ್‌ ಉತ್ತಮ ಸಾಧನೆ ಮಾಡಲಿದೆ: ನವಜೋತ್‌ ಸಿಂಗ್‌ ಸಿಧು

ಭಾನುವಾರ, ಜೂನ್ 16, 2019
28 °C

ರಾಹುಲ್‌ ನಾಯಕತ್ವದಿಂದ 2019ರ ಚುನಾವಣೆಯಲ್ಲಿ ಕಾಂಗ್ರೆಸ್‌ ಉತ್ತಮ ಸಾಧನೆ ಮಾಡಲಿದೆ: ನವಜೋತ್‌ ಸಿಂಗ್‌ ಸಿಧು

Published:
Updated:
ರಾಹುಲ್‌ ನಾಯಕತ್ವದಿಂದ 2019ರ ಚುನಾವಣೆಯಲ್ಲಿ ಕಾಂಗ್ರೆಸ್‌ ಉತ್ತಮ ಸಾಧನೆ ಮಾಡಲಿದೆ: ನವಜೋತ್‌ ಸಿಂಗ್‌ ಸಿಧು

ಅಮೃತಸರ: ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಆಯ್ಕೆ ಮಾಡುವುದರಿಂದ 2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ಮಾಡಲಿದೆ ಎಂದು ಪಂಜಾಬ್‌ ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ಅವರು ಹೇಳಿದ್ದಾರೆ.

ಅಮೃತಸರ ಸಂಸದ ಗುರ್ಜಿತ್‌ ಔಜಲಾ ಅವರು ಇಲ್ಲಿನ ಮುಧಲ್‌ ಗ್ರಾಮವನ್ನು ಸಂಸದರ ಆದರ್ಶ ಗ್ರಾಮ ಯೋಜನೆ ಅಡಿಯಲ್ಲಿ ದತ್ತು ಪಡೆದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಧು, ರಾಹುಲ್‌ ಗಾಂಧಿ ಪಕ್ಷದ ಸಾರಥ್ಯ ವಹಿಸಿಕೊಳ್ಳುವುದು ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಕೆಲದಿನಗಳ ಹಿಂದೆ ಬಿಜೆಪಿಯ ಪಂಜಾಬ್‌ ರಾಜ್ಯ ಘಟಕದ ಅಧ್ಯಕ್ಷ ವಿಜಯ್‌ ಸಂಪ್ಲಾ, ರಾಹುಲ್‌ ಗಾಂಧಿಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡುವ ವಿಚಾರ ಕುರಿತು ವ್ಯಂಗ್ಯವಾಡಿದ್ದರು. ಅವರು, ‘ರಾಹುಲ್‌ಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡಿದರೆ, ಕಾಂಗ್ರೆಸ್‌ ದೇಶದಿಂದ ಕಾಣೆಯಾಗಲಿದೆ’ ಎಂದು ಲೇವಡಿ ಮಾಡಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry