ಭಾನುವಾರ, ಸೆಪ್ಟೆಂಬರ್ 22, 2019
23 °C

ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ

Published:
Updated:
ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ

ನವದೆಹಲಿ: ಅ.22ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯ್ಕೆ ಸಮಿತಿ 15 ಸದ್ಯಸ್ಯರನ್ನು ಒಳಗೊಂಡ ಭಾರತ ತಂಡವನ್ನು ಪ್ರಕಟಿಸಿದೆ.

ಇತ್ತೀಚಿಗೆ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಹಾಗೂ ಟಿ–20 ಸರಣಿಯಲ್ಲಿ ಸ್ಥಾನ ಪಡೆದಿದ್ದ ಕನ್ನಡಿಗ ಕೆ.ಎಲ್‌. ರಾಹುಲ್‌, ವೇಗಿ ಮೊಹಮ್ಮದ್‌ ಶಮಿ, ಉಮೇಶ್‌ ಯಾದವ್‌ ಅವರನ್ನು ನ್ಯೂಜಿಲೆಂಡ್‌ ವಿರುದ್ಧದ ಸರಣಿಗೆ ಕೈಬಿಡಲಾಗಿದೆ.

ಉಳಿದಂತೆ ಅನುಭವಿ ಸ್ವಿನರ್‌ಗಳಾದ ಆರ್‌. ಅಶ್ವಿನ್‌ ಹಾಗೂ ರವಿಂದ್ರ ಜಡೇಜ ಅವರಿಗೆ ಮತ್ತೊಮ್ಮೆ ವಿಶ್ರಾಂತಿ ನೀಡಲಾಗಿದೆ.

ವೇಳಾಪಟ್ಟಿ: ಅ. 17 ಮತ್ತು 19ರಂದು ಮುಂಬೈನ ಬ್ರಾಬೌರ್ನ್ ಕ್ರೀಡಾಂಗಣದಲ್ಲಿ ಎರಡು ಅಭ್ಯಾಸ ಪಂದ್ಯಗಳು ನಡೆಯಲಿವೆ.

ಅ. 22ರಂದು ಮೊದಲ ಏಕದಿನ ಪಂದ್ಯ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.

ಅ. 25ರಂದು ಎರಡನೇ ಏಕದಿನ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಅ.29ರಂದು ಕಾನ್ಪುರದ ಗ್ರೀನ್‌ ಪಾರ್ಕ್‌ನಲ್ಲಿ ಮೂರನೇ ಏಕದಿನ ಪಂದ್ಯ ನಡೆಯಲಿದೆ.

ಪ್ರಕಟಿತ ತಂಡ ಇಂತಿದೆ: ವಿರಾಟ್‌ ಕೊಹ್ಲಿ(ನಾಯಕ), ರೋಹಿತ್‌ ಶರ್ಮಾ, ಶಿಖರ್‌ ಧವನ್‌, ರಹಾನೆ, ಮನೀಷ್‌ ಪಾಂಡೆ, ಎಂ.ಎಸ್‌. ದೋನಿ, ಕೇದಾರ್‌ ಜಾದವ್‌, ದಿನೇಶ್‌ ಕಾರ್ತಿಕ್‌, ಹಾರ್ದಿಕ್‌ ಪಾಂಡ್ಯ, ಭುವನೇಶ್ವರ್‌ ಕುಮಾರ್‌, ಜಸ್‌ಪ್ರೀತ್‌ ಬೂಮ್ರಾ, ಕುಲದೀಪ್‌ಯಾದವ್‌, ಅಕ್ಷರ್‌ ಪಟೇಲ್‌, ಯಜುವೇಂದ್ರ ಚಾಹಲ್‌, ಶಾರ್ದೂಲ್‌ ಠಾಕೂರ್‌.

Post Comments (+)