ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಡಾಲ್‌ಗೆ ಶರಣಾದ ಸಿಲಿಕ್

Last Updated 14 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಶಾಂಘೈ: ರಫೆಲ್ ನಡಾಲ್ ಶಾಂಘೈ ಮಾಸ್ಟರ್ಸ್ ಟೆನಿಸ್ ಟೂರ್ನಿಯಲ್ಲಿ ಶನಿವಾರ ಮರಿನ್ ಸಿಲಿಕ್ ಅವರನ್ನು ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟರು.‌

ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿರುವ ನಡಾಲ್‌ 7–5, 7–6ರಲ್ಲಿ ನೇರ ಸೆಟ್‌ಗಳಿಂದ ಕ್ರೊವೇಷ್ಯಾದ ಆಟಗಾರನಿಗೆ ಸೋಲುಣಿಸಿದರು.

ನ್ನೊಂದು ಪಂದ್ಯದಲ್ಲಿ ರೋಜರ್ ಫೆಡರರ್‌ ಹಾಗೂ ಜುವಾನ್ ಮಾರ್ಟಿನ್ ಡೆಲ್ ಪೊಟ್ರೊ ಆಡಲಿದ್ದಾರೆ. ಈ ಪಂದ್ಯದಲ್ಲಿ ಗೆದ್ದ ಆಟಗಾರನೊಂದಿಗೆ ನಡಾಲ್ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದ್ದಾರೆ.

16 ಗ್ರ್ಯಾಂಡ್‌ಸ್ಲಾಮ್‌ಗಳನ್ನು ಗೆದ್ದುಕೊಂಡಿರುವ ನಡಾಲ್ ಎದುರು ಸಿಲಿಕ್ ಆಟ ಮಂಕಾಯಿತು. ಈ ಋತುವಿನಲ್ಲಿ ಏಳನೇ ಪ್ರಶಸ್ತಿಯ ನಿರೀಕ್ಷೆಯಲ್ಲಿರುವ ಸ್ಪೇನ್‌ನ ಆಟಗಾರ ನಿಖರವಾದ ಆಟದ ಮೂಲಕ ಗಮನ ಸೆಳೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT