ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿತನ ಕಾಪಾಡಿಕೊಳ್ಳಲು ಭಾರತ ಸಮರ್ಥ: ನಿಲೇಕಣಿ

Last Updated 14 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ‘ಡಿಜಿಟಲ್‌ ತಂತ್ರಜ್ಞಾನ ಕಾಲಘಟ್ಟದಲ್ಲಿ ಖಾಸಗೀತನವನ್ನು ಕಾಪಾಡಿಕೊಳ್ಳಲು ಭಾರತವು ಸಮರ್ಥವಾಗಿದೆ’ ಎಂದು ಆಧಾರ್‌ ರೂವಾರಿ ನಂದನ್‌ ನಿಲೇಕಣಿ ಹೇಳಿದ್ದಾರೆ.

‘ಸರ್ಕಾರದ ವಿಶಿಷ್ಟ ಗುರುತಿನ ಚೀಟಿ ಸಂಖ್ಯೆ ಯೋಜನೆಯು ಖಾಸಗಿತನ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆಯಾಗಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ‘ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ ಆಧಾರ್‌ ಯೋಜನೆ ವ್ಯಾಪ್ತಿಗೆ ಈಗಾಗಲೇ 100 ಕೋಟಿಗೂ ಹೆಚ್ಚು ನಾಗರಿಕರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈಗಿನ ಕೇಂದ್ರ ಸರ್ಕಾರ ಕೂಡ ಈ ಯೋಜನೆಯನ್ನು ಬೆಂಬಲಿಸಿದೆ’ ಎಂದು ಅವರು ಹೇಳಿದ್ದಾರೆ.

ವಿಶ್ವಬ್ಯಾಂಕ್‌ ಮತ್ತು ಅಂತರರಾಷ್ಟ್ರೀಯ ಹಣಕಾಸು ನಿಧಿಯ ಸಮಾವೇಶದ ಅಂಗವಾಗಿ ಜಾಗತಿಕ ಅಭಿವೃದ್ಧಿ ಕೇಂದ್ರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಹಲವು ಸಂಘಟನೆಗಳ ಕಾರ್ಯಕರ್ತರು ಆಧಾರ್‌ನಿಂದ ಖಾಸಗೀತನಕ್ಕೆ ಧಕ್ಕೆಯಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಖಾಸಗೀತನ ಮೂಲಭೂತ ಹಕ್ಕು ಆಗಿರುವುದರಿಂದ ಇಂತಹ ಅಸ್ತಿತ್ವವಾದದ ಪ್ರಶ್ನೆ ಎದ್ದಿದೆ’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT