ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆಯಲ್ಲಿ ಗೂಳಿ ಓಟ

Last Updated 14 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ ಎರಡನೇ ವಾರವೂ ಸಕಾರಾತ್ಮಕ ವಹಿವಾಟು ನಡೆಯಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್ಇ) ವಾರದ ವಹಿವಾಟಿನಲ್ಲಿ 618 ಅಂಶ ಏರಿಕೆ ಕಂಡು 32,432 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 187 ಅಂಶಗಳಷ್ಟು ಹೆಚ್ಚಾಗಿ ಸಾರ್ವಕಾಲಿಕ ಗರಿಷ್ಠ ಮಟ್ಟವಾದ 10,167 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ.

ವಾರದ ವಹಿವಾಟಿನ ಮೊದಲ ಮೂರು ದಿನಗಳಲ್ಲಿ ಸೂಚ್ಯಂಕಗಳು ಅಲ್ಪ ಇಳಿಕೆ ಕಂಡಿದ್ದವು. ನಂತರ ಚೇತರಿಕೆ ಹಾದಿಗೆ ಮರಳಿದವು.

ಆರ್ಥಿಕ ಅಂಶಗಳು ಪ್ರಭಾವ: ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರ ಸೆಪ್ಟೆಂಬರ್‌ನಲ್ಲಿ ಶೇ 3.28 ರಷ್ಟಿದೆ. ಕೈಗಾರಿಕಾ ಪ್ರಗತಿ ಸೂಚ್ಯಂಕ ಆಗಸ್ಟ್‌ನಲ್ಲಿ 9 ತಿಂಗಳ ಗರಿಷ್ಠ ಮಟ್ಟವಾದ
ಶೇ 4.3ಕ್ಕೆ ಏರಿಕೆ ಕಂಡಿದೆ. ಈ ಅಂಶಗಳು ಷೇರುಪೇಟೆಯಲ್ಲಿ ಸಕಾರಾತ್ಮಕ ವಹಿವಾಟು ನಡೆಯುವಂತೆ ಮಾಡಿದವು.

ಮಧ್ಯಮ ಶ್ರೇಣಿ ಸೂಚ್ಯಂಕಗಳು 126 ಅಂಶ ಮತ್ತು ಕೆಳ ಮಧ್ಯಮ ಶ್ರೇಣಿ ಸೂಚ್ಯಂಕಗಳು 296 ಅಂಶ ಏರಿಕೆ ಕಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT