ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಕಾರ್ಮಿಕ ಸಮ್ಮೇಳನ ನಡೆಸಲು ಆಗ್ರಹ

Last Updated 15 ಅಕ್ಟೋಬರ್ 2017, 9:19 IST
ಅಕ್ಷರ ಗಾತ್ರ

ಮೈಸೂರು: ಭಾರತೀಯ ಕಾರ್ಮಿಕ ಸಮ್ಮೇಳನ ಮಾದರಿಯಲ್ಲಿ ರಾಜ್ಯ ಸರ್ಕಾ ರವು ‘ಕರ್ನಾಟಕ ಕಾರ್ಮಿಕ ಸಮ್ಮೇಳನ’ ನಡೆಸಬೇಕು ಎಂದು ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ (ಸಿಐಟಿಯು) ಆಗ್ರಹಿಸಿದೆ. ಶನಿವಾರ ಕೊನೆಗೊಂಡ ಎರಡು ದಿನಗಳ ಸಿಐಟಿಯು ರಾಜ್ಯ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

‘ರಾಜ್ಯದಾದ್ಯಂತ ಸಮಾನ ಕನಿಷ್ಠ ವೇತನ ₹ 18,000 ನಿಗದಿಪಡಿಸಬೇಕು. ಗುತ್ತಿಗೆ ಉದ್ಯೋಗಿಗಳನ್ನು ಕಾಯಂಗೊಳಿಸಬೇಕು, ಕಾರ್ಮಿಕ ಸಂಘಟನೆಗಳಿಗೆ ಕಾನೂನಾತ್ಮಕ ಮಾನ್ಯತೆ ನೀಡಬೇಕು ಹಾಗೂ ಅಸಂಘಟಿತ ಕಾರ್ಮಿಕರಿಗೆ ಭವಿಷ್ಯ ನಿಧಿ ಶಾಸನ ರೂಪಿಸಬೇಕು’ ಎಂದು ಒತ್ತಾಯಿಸಿದೆ.

ಭಾರತೀಯ ಕಾರ್ಮಿಕ ಸಮ್ಮೇಳ ನದ ಶಿಫಾರಸಿನಂತೆ ಸ್ಕೀಂ ನೌಕರರಾದ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಎಲ್ಲ ಜಿಲ್ಲೆಗಳಲ್ಲಿ ಕಾರ್ಮಿಕ ನ್ಯಾಯಾಲಯ ಸ್ಥಾಪಿಸಬೇಕು ಎಂದು ಸಿಐಟಿಯು ಉಪಾಧ್ಯಕ್ಷ ಕೆ.ಶಂಕರ್‌ ಹಾಗೂ ಪ್ರಧಾನ ಕಾರ್ಯದರ್ಶಿ ಎಂ.ಎಸ್‌.ಮೀನಾಕ್ಷಿ ಸುಂದರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT