ಗುಜರಾತ್‌ಗೆ ಇಂದು ಪ್ರಧಾನಿ ಮೋದಿ

ಮಂಗಳವಾರ, ಜೂನ್ 25, 2019
22 °C

ಗುಜರಾತ್‌ಗೆ ಇಂದು ಪ್ರಧಾನಿ ಮೋದಿ

Published:
Updated:

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತವರು ರಾಜ್ಯ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ.

ಗಾಂಧಿನಗರದ ಬಳಿ ಗ್ರಾಮದಲ್ಲಿ ಆಯೋಜಿಸಲಾಗಿರುವ ‘ಗುಜರಾತ್‌ ಗೌರವ ಮಹಾಸಮ್ಮೇಳನ’ದಲ್ಲಿ ಏಳು ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬಿಜೆಪಿ ರಾಜ್ಯದಾದ್ಯಂತ ಹಮ್ಮಿಕೊಂಡಿದ್ದ ಬಿಜೆಪಿ ಗೌರವ ಯಾತ್ರೆ ನಾಳೆ ಸಮಾವೇಶಗೊಳ್ಳಲಿದೆ. ಮುಂಬರುವ ಚುನಾವಣೆ ಲಕ್ಷ್ಯದಲ್ಲಿಟ್ಟುಕೊಂಡು ಮೋದಿ ಅವರು ಗುಜರಾತ್‌ಗೆ ಭಾರಿ ಕೊಡುಗೆ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಇದಕ್ಕಾಗಿಯೇ ಚುನಾವಣಾ ಆಯೋಗ ಕೇವಲ ಹಿಮಾಚಲ ಪ್ರದೇಶ ಚುನಾವಣಾ ವೆಳಾಪಟ್ಟಿ ಪ್ರಕಟಿಸಿ, ಗುಜರಾತ್‌ ವಿಧಾನಸಭೆಯ ಚುನಾವಣೆ ದಿನಾಂಕ ಪ್ರಕಟಿಸಿಲ್ಲ ಎಂದು ಕಾಂಗ್ರೆಸ್‌ ಆರೋಪಿಸಿದೆ.ಈ ಹಿನ್ನೆಲೆಯಲ್ಲಿ ಪ್ರಧಾನಿಯ ಸೋಮವಾರದ ಗುಜರಾತ್‌ ಭೇಟಿ ಭಾರಿ ಮಹತ್ವ ಪಡೆದುಕೊಂಡಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry