ಮತ್ತೆ ಅತ್ಯಾಚಾರದ ಬೆದರಿಕೆ: ಸಂತ್ರಸ್ತೆ ಆತ್ಮಹತ್ಯೆ

ಭಾನುವಾರ, ಜೂನ್ 16, 2019
30 °C

ಮತ್ತೆ ಅತ್ಯಾಚಾರದ ಬೆದರಿಕೆ: ಸಂತ್ರಸ್ತೆ ಆತ್ಮಹತ್ಯೆ

Published:
Updated:
ಮತ್ತೆ ಅತ್ಯಾಚಾರದ ಬೆದರಿಕೆ: ಸಂತ್ರಸ್ತೆ ಆತ್ಮಹತ್ಯೆ

ಲಖನೌ: ಆರೋಪಿಗಳು ಮತ್ತೆ ಅತ್ಯಾಚಾರ ನಡೆಸುವ ಬೆದರಿಕೆ ಹಾಕಿದ್ದರಿಂದ ಮನನೊಂದು ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ, 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಪ್ರಕರಣ ಉತ್ತರ ಪ್ರದೇಶದ ಬಾಘ್ಪತ್‌ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ರಾಮೊಲಾ ಎಂಬ ಪ್ರದೇಶದಲ್ಲಿರುವ ತನ್ನ ಮನೆಯಲ್ಲಿ ಶುಕ್ರವಾರ ಸಂಜೆ ಫ್ಯಾನ್‌ಗೆ ನೇಣುಹಾಕಿಕೊಂಡು ಸಂತ್ರಸ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

ಅದೇ ಗ್ರಾಮದ ಐವರು ಐದು ತಿಂಗಳ ಹಿಂದೆ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು ಎಂದು ಮೂಲಗಳು ತಿಳಿಸಿ‌ವೆ. ಸಂತ್ರಸ್ತೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು ಮಾತ್ರವಲ್ಲದೆ ಆರೋಪಿಗಳ ಹೆಸರುಗಳನ್ನೂ ಹೇಳಿದ್ದರು. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಮೂಲಗಳು ಹೇಳಿವೆ.

ಐವರು ಆರೋಪಿಗಳ ಪೈಕಿ ಮೂವರು ಆಕೆಯನ್ನು ಅಡ್ಡಗಟ್ಟಿ, ದೂರನ್ನು ವಾಪಸ್‌ ಪಡೆಯದಿದ್ದರೆ ಮತ್ತೆ ಅತ್ಯಾಚಾರ ಎಸಗುವುದಾಗಿ ಬೆದರಿಸಿದ್ದರು. ಅಶ್ಲೀಲವಾಗಿ ನಿಂದಿಸಿದ್ದರು ಎಂದು ಮೂಲಗಳು ಹೇಳಿವೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry