ಶನಿವಾರ, ಸೆಪ್ಟೆಂಬರ್ 21, 2019
21 °C

ತಾತನ ಸಾವಿಗೆ ನೊಂದು ಮೊಮ್ಮಗಳು ಆತ್ಮಹತ್ಯೆ

Published:
Updated:

ಲಖನೌ: ತಾತನ ಸಾವಿನಿಂದ ಮನನೊಂದ ಹದಿಹರೆಯದ ಬಾಲಕಿಯೊಬ್ಬಳು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದೋಧಂಕೇಡ ಪ್ರದೇಶದಲ್ಲಿ ನಡೆದಿದೆ.

ಕೆಲ ದಿನಗಳ ಹಿಂದೆ ಬಾಲಕಿಯ ತಾತ ಮೃತಪಟ್ಟಿದ್ದರು. ತಾತನನ್ನು ಬಹಳ ಹಚ್ಚಿಕೊಂಡಿದ್ದ ಬಾಲಕಿ ತಾತನ ಮರಣದ ನಂತರ ಖಿನ್ನತೆಗೆ ಒಳಗಾಗಿದ್ದಳು. ಗೆಳೆಯರೊಂದಿಗೂ ಬೆರೆಯುತ್ತಿರಲಿಲ್ಲ. ಶಾಲೆಗೆ ಸರಿಯಾಗಿ ಹಾಜರಾಗುತ್ತಿರಲಿಲ್ಲ. ಶನಿವಾರ ತಾತನ ಅಂತ್ಯಕ್ರಿಯೆ ನಡೆದ ಜಾಗಕ್ಕೆ ಹೋಗಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿಕೊಂಡಿದ್ದಾಳೆ. ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆ ವೇಳೆಗಾಗಲೇ ಆಕೆ ಮೃತಪಟ್ಟಿದ್ದಳು’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಬಾಲಕಿಯ ತಂದೆ ಕೆಲ ತಿಂಗಳ ಹಿಂದೆ ಮೃತಪಟ್ಟಿದ್ದಾರೆ. ಆ ನಂತರ ತಾತ ಮೊಮ್ಮಕ್ಕಳ ಜವಾಬ್ದಾರಿ ವಹಿಸಿಕೊಂಡಿದ್ದರು. ಬಾಲಕಿ ತಾತನನ್ನು ಅತೀವವಾಗಿ ಹಚ್ಚಿಕೊಂಡಿದ್ದಳು’ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Post Comments (+)