‘ರಾಹುಲ್‌ಗೆ ಮೈತ್ರಿಕೂಟ ಮುನ್ನಡೆಸುವ ಅವಕಾಶ’

ಮಂಗಳವಾರ, ಜೂನ್ 18, 2019
23 °C

‘ರಾಹುಲ್‌ಗೆ ಮೈತ್ರಿಕೂಟ ಮುನ್ನಡೆಸುವ ಅವಕಾಶ’

Published:
Updated:
‘ರಾಹುಲ್‌ಗೆ ಮೈತ್ರಿಕೂಟ ಮುನ್ನಡೆಸುವ ಅವಕಾಶ’

ನವದೆಹಲಿ: ‘ರಾಹುಲ್ ಗಾಂಧಿ ಕಾಂಗ್ರೆಸ್‌ ಅಧ್ಯಕ್ಷರಾದರೆ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಮೈತ್ರಿಕೂಟ ಮುನ್ನಡೆಸಲು ಅರ್ಹತೆ ದೊರೆತಂತಾಗುತ್ತದೆ’ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಸಲ್ಮಾನ್ ಖುರ್ಶಿದ್ ಅಭಿಪ್ರಾಯಪಟ್ಟಿದ್ದಾರೆ.

‘ರಾಹುಲ್ ಪಕ್ಷದ ಅಧ್ಯಕ್ಷರಾದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅವರೇ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂಬುದನ್ನೂ ಸೂಚಿಸುತ್ತದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಹುಲ್‌ ಈ ಹಿಂದೆ ಸಂಪುಟದ ಭಾಗವಾಗಿರಲಿಲ್ಲ ಎಂಬ ಆಕ್ಷೇಪ ಬರಬಹುದು. ಆದರೆ, ಈ ಹಿಂದೆ ಸಂಪುಟದಲ್ಲಿ ಕೆಲಸ ಮಾಡದವರೂ ಪ್ರಧಾನಿಯಾದ ತಾಜಾ ಉದಾಹರಣೆ ಇದೆ’ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

‘ರಾಹುಲ್ ಪಕ್ಷದ ಅಧ್ಯಕ್ಷರಾಗುವುದು ಒಂದು ರೀತಿಯಲ್ಲಿ ಉತ್ತೇಜನಕ್ಕೆ ಕಾರಣವಾಗುತ್ತದೆ. ಅದರಿಂದ ಯುವಜನರು ಪಕ್ಷದತ್ತ ಆಕರ್ಷಿತರಾಗುತ್ತಾರೆ ಮತ್ತು ಪಕ್ಷದ ಶಕ್ತಿ ಹೆಚ್ಚುತ್ತದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಿದ್ಧಾಂತಗಳ ನಡುವಿನ ಸಂಘರ್ಷ:ಮುಂದಿನ ಲೋಕಸಭಾ ಚುನಾವಣೆ (2019) ಸಿದ್ಧಾಂತಗಳ ನಡುವಿನ ಸಂಘರ್ಷವಾಗಿರುತ್ತದೆ ಎಂದು ಖುರ್ಷಿದ್‌ ಸುಳಿವು ನೀಡಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಪರ್ಯಾಯ ಶಕ್ತಿ ಅಗತ್ಯವಾಗಿದೆ. ಇದಕ್ಕಾಗಿ ಸಮಾನಮನಸ್ಕ ಜಾತ್ಯತೀತ ಶಕ್ತಿಗಳ ಜತೆ ಹೊಂದಾಣಿಕೆ ಅಗತ್ಯ ಎಂದು ಅವರು ಸಲಹೆ ಮಾಡಿದ್ದಾರೆ.

‘ಮೈತ್ರಿಕೂಟದಲ್ಲಿ ಕಾಂಗ್ರೆಸ್ ನಿಸ್ಸಂಶಯವಾಗಿ ದೊಡ್ಡ ಪಕ್ಷವಾಗಿರಲಿದ್ದು, ರಾಹುಲ್ ಮೈತ್ರಿಕೂಟ ಮುನ್ನಡೆಸಲಿದ್ದಾರೆ. ಅವರ ನಾಯಕತ್ವವನ್ನು ಎಲ್ಲರೂ ಒಪ್ಪುತ್ತಾರೆ’ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry