ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ಯೋಗೇಶ್ವರ್‌?

ಬಿಜೆಪಿ ನಾಯಕರ ಜೊತೆ ಇಂದು ಚರ್ಚೆ
Last Updated 15 ಅಕ್ಟೋಬರ್ 2017, 19:18 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ತೊರೆದಿರುವ ಚನ್ನಪಟ್ಟಣ್ಣ ಶಾಸಕ ಸಿ.ಪಿ.ಯೋಗೇಶ್ವರ್ ಬಿಜೆಪಿ ಸೇರುವ ಸಿದ್ಧತೆ ನಡೆಸಿದ್ದು, ಈ ಸಂಬಂಧ ಸೋಮವಾರ ಪಕ್ಷದ ಹಿರಿಯ ನಾಯಕರ ಜತೆ ಮಾತುಕತೆ ನಡೆಸಲಿದ್ದಾರೆ.

ಈಗಾಗಲೇ ಬಿ.ಎಸ್‌.ಯಡಿಯೂರಪ್ಪ, ಆರ್.ಅಶೋಕ್‌ ಮತ್ತು ಡಿ.ವಿ.ಸದಾನಂದಗೌಡರ ಅವರನ್ನು ಸಂಪರ್ಕಿಸಿರುವ ಯೋಗೇಶ್ವರ್ ಬಿಜೆಪಿ ಸೇರುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಬಿಜೆಪಿ ಸೇರಿದರೆ ಚನ್ನಪಟ್ಟಣ ಮತ್ತು ಮದ್ದೂರು ವಿಧಾನಸಭಾ ಕ್ಷೇತ್ರದ ಟಿಕೆಟ್‌ ನೀಡಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದಾರೆ. ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಯೋಗೇಶ್ವರ್, ಮದ್ದೂರಿನಲ್ಲಿ ತಮ್ಮ ಕುಟುಂಬದ ಸದಸ್ಯರೊಬ್ಬರನ್ನು ಕಣಕ್ಕೆ ಇಳಿಸುವ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಪಕ್ಷಕ್ಕೆ ಬಂದರೆ ರಾಮನಗರ ಜಿಲ್ಲೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಟಿಕೆಟ್‌ ಹಂಚಿಕೆ ಜವಾಬ್ದಾರಿ ನೀಡಬೇಕು ಎಂಬ ಷರತ್ತು ಯೋಗೇಶ್ವರ್‌ ಹಾಕಿಲ್ಲ. ಅಂತಹ ಷರತ್ತನ್ನು ಪಕ್ಷ ಒಪ್ಪುವುದೂ ಇಲ್ಲ. ಚನ್ನಪಟ್ಟಣ ಮತ್ತು ಮದ್ದೂರಿನಲ್ಲಿ ಬಿಜೆಪಿಗೆ ಗಟ್ಟಿ ನೆಲೆ ಇಲ್ಲ. ಯೋಗೇಶ್ವರ್ ಸೇರುವುದರಿಂದ ಅನುಕೂಲವಾಗುತ್ತದೆ. ಈ ಎರಡು ಕ್ಷೇತ್ರಗಳ ಟಿಕೆಟ್‌ ನೀಡುವುದರಿಂದ ಕಳೆದುಕೊಳ್ಳುವುದು ಏನೂ ಇಲ್ಲ’ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಪಕ್ಷ ಸೇರ್ಪಡೆ ಕುರಿತು ಯೋಗೇಶ್ವರ್ ನಾಳೆ ಮಾತುಕತೆಗೆ ಬರಲಿದ್ದಾರೆ. ಆ ಬಳಿಕವೇ ಸ್ಪಷ್ಟ ಚಿತ್ರಣ ಸಿಗಲಿದೆ’ ಎಂದೂ ಅವರು ಹೇಳಿದರು.

ಇದಕ್ಕೆ ಮೊದಲು ಯೋಗೇಶ್ವರ್ ಜೆಡಿಎಸ್‌ ನಾಯಕರನ್ನು ಸಂಪರ್ಕಿಸುವ ಪ್ರಯತ್ನ ಮಾಡಿದ್ದರು. ಆದರೆ, ಅವರು ಬಯಸುವಂತೆ ಚನ್ನಪಟ್ಟಣ ಮತ್ತು ಮದ್ದೂರು ವಿಧಾನಸಭಾ ಕ್ಷೇತ್ರಗಳಲ್ಲಿ ಟಿಕೆಟ್‌ ಭರವಸೆ ನೀಡುವ ಸಾಧ್ಯತೆ ಇಲ್ಲ. ಈ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಉತ್ತಮ ಸ್ಥಿತಿಯಲ್ಲಿದೆ. ಚನ್ನಪಟ್ಟಣದಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವ ಸಾಧ್ಯತೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT