ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ

ಮಂಗಳವಾರ, ಜೂನ್ 25, 2019
29 °C

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ

Published:
Updated:

ಕೆ.ಆರ್.ನಗರ (ಮೈಸೂರು): ‘ಆಡದೇ ಮಾಡದವನು ಉತ್ತಮ, ಆಡಿಯೂ ಮಾಡದವನು ಅಧಮ ಎಂಬ ಮಾತು ಕನ್ನಡದಲ್ಲಿದೆ. ಆದರೆ, ಪ್ರಧಾನಮಂತ್ರಿ ಹುದ್ದೆ ಕುರಿತು ಗೌರವ ಇರುವುದರಿಂದ ಮೋದಿ ಅವರನ್ನು ಅಧಮ ಎನ್ನಲಾರೆ’ ಎಂದು ಎಐಸಿಸಿ ಕಾರ್ಯದರ್ಶಿ ವಿಷ್ಣುನಾದನ್ ವಾಗ್ದಾಳಿ ನಡೆಸಿದರು.

ಇಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ನರೇಂದ್ರ ಮೋದಿ ಅವರು ಕಪ್ಪುಹಣ ತಂದು ಜನಸಾಮಾನ್ಯರ ಖಾತೆಗಳಿಗೆ ಹಣ ಹಾಕುತ್ತೇನೆ ಎಂದು ಹೇಳಿದ್ದರು. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇನೆ ಎಂದಿದ್ದರು. ಅವರು ಹೇಳುವುದೆಲ್ಲ ಸುಳ್ಳು. ಅವರನ್ನು ಏನೆಂದು ಕರೆಯಬೇಕು ಎಂದು ಜನರೇ ತೀರ್ಮಾನಿಸಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಸವಣ್ಣನವರ ಪಥದಲ್ಲಿ ಸಾಗುತ್ತಿದ್ದಾರೆ. ಅವರ ಮಂತ್ರಿ ಮಂಡಲ ಅನುಭವ ಮಂಟಪದಂತೆ ಎಂದು ಶ್ಲಾಘಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry