ಶನಿವಾರ, ಸೆಪ್ಟೆಂಬರ್ 21, 2019
21 °C

ಕಾರುಗಳ ಗಾಜು ಒಡೆದ ದುಷ್ಕರ್ಮಿಗಳು

Published:
Updated:

ಬೆಂಗಳೂರು: ಬನಶಂಕರಿಯ ನಾಗೇಂದ್ರ ಬ್ಲಾಕ್‌ನ 11ನೇ ಮುಖ್ಯರಸ್ತೆಯಲ್ಲಿ ಭಾನುವಾರ ರಾತ್ರಿ ರಸ್ತೆ ಬದಿ ನಿಲ್ಲಿಸಿದ 5 ಕಾರುಗಳ ಗಾಜುಗಳನ್ನು ದುಷ್ಕರ್ಮಿಗಳು ಹಾಕಿ ಸ್ಟಿಕ್‌ನಿಂದ ಒಡೆದಿದ್ದಾರೆ.

ರಾತ್ರಿ 9.30ರ ಸುಮಾರಿಗೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಕಾರುಗಳ ಗಾಜುಗಳನ್ನು ಒಡೆದಿದ್ದಾರೆ. ಅವರನ್ನು ಹಿಡಿಯಲು ಯತ್ನಿಸಿದಾಗ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಅಡ್ಡಾದಿಡ್ಡಿಯಾಗಿ ಬೈಕ್ ಚಾಲನೆ ಮಾಡಿದ ಅವರು ಇದೇ ಭಾಗದಲ್ಲಿನ ಕೆಲ ಬೈಕ್‌ಗಳಿಗೂ ಡಿಕ್ಕಿ ಹೊಡೆದಿದ್ದಾರೆ ಎಂದು ಗಿರಿನಗರ ಪೊಲೀಸರು ತಿಳಿಸಿದರು.

ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿರಬಹುದು. ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಆರೋಪಿಗಳ ಕೃತ್ಯ ಸೆರೆಯಾಗಿದೆ. ಹನುಮಂತನಗರ ಹಾಗೂ ಚನ್ನಮ್ಮನ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲೂ 7 ಕಾರುಗಳ ಗಾಜು ಒಡೆದಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಘಟನೆ ಬಗ್ಗೆ ಠಾಣೆಗೆ ಕೆರೆ ಮಾಡಿ ಮಾಹಿತಿ ನೀಡಿದ್ದು, ಯಾರೊಬ್ಬರೂ ದೂರು ಕೊಟ್ಟಿಲ್ಲ. ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಪತ್ತೆ ಹಚ್ಚುತ್ತೇವೆ ಎಂದು ಹೇಳಿದರು.

Post Comments (+)