ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯೋಜನೆಗಳ ಯಶಸ್ವಿಗೆ ಸಹಕರಿಸಿ’

Last Updated 16 ಅಕ್ಟೋಬರ್ 2017, 5:38 IST
ಅಕ್ಷರ ಗಾತ್ರ

ಬೀದರ್‌: ‘ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ನೀಡುವ ಯೋಜನೆಗಳ ಯಶಸ್ವಿಗೆ ಬ್ಯಾಂಕ್‌ಗಳ ಅಧಿಕಾರಿಗಳು ಸಹಕಾರ ನೀಡಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ ಹೇಳಿದರು.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ನಗರದಲ್ಲಿ ಶುಕ್ರವಾರ ನಡೆದ ಕೈಗಾರಿಕಾ ಸ್ಪಂದನ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.

‘ಮುಖ್ಯಮಂತ್ರಿ ಸ್ವಯಂ ಉದ್ಯೋಗ ಸೃಜನ ಯೋಜನೆ ಮತ್ತು ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ ಅಡಿ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯಲ್ಲಿ ಶಿಫಾರಸು ಮಾಡಿರುವ ಕೆಲವು ಅರ್ಜಿಗಳಳಿಗೆ ಕೆಲವು ಬಾಂಕ್‌ಗಳು ಮನ್ನಣೆ ಕೊಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಯುವ ಉದ್ಯೋಗಿಗಳ ಮನವಿಗೆ ಸ್ಪಂದಿಸಿ ಜಿಲ್ಲೆಯ ಅಭಿವೃದ್ಧಿಗೆ ನೆರವಾಗಬೇಕು’ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸೆಲ್ವಮಣಿ ಆರ್., ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ, ಜಿಲ್ಲೆಯ ಪ್ರಮುಖ ಕೈಗಾರಿಕಾ ಸಂಘ ಸಂಸ್ಥೆಗಳ ಪ್ರಮುಖರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT