ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಲಿಂಗಾಯತ ಧರ್ಮ ಮಾನ್ಯತೆ: ಶೀಘ್ರ ಶಿಫಾರಸು’

Last Updated 16 ಅಕ್ಟೋಬರ್ 2017, 5:39 IST
ಅಕ್ಷರ ಗಾತ್ರ

ಬಸವಕಲ್ಯಾಣ: ‘ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಬೇಕು ಎಂದು ಶೀಘ್ರವೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಈ ಬಗ್ಗೆ ಗೊಂದಲವಿದ್ದರೂ ಸತ್ಯಕ್ಕೆ ಯಾವಾಗಲೂ ಜಯ ನಿಶ್ಚಿತ’ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಹೇಳಿದರು.

ಭಾನುವಾರ ಇಲ್ಲಿ ಆಯೋಜಿಸಿದ್ದ ಕಲ್ಯಾಣಪರ್ವದ 2ನೇ ದಿನದ ಧರ್ಮಚಿಂತನ ಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು. `ಇಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕಾಗಿ ಗೋ.ರು.ಚನ್ನಬಸಪ್ಪ ಅವರ ನೇತೃತ್ವದ ಸಮಿತಿ ₹600 ಕೋಟಿಯ ಪ್ರಸ್ತಾವ ಸಲ್ಲಿಸಿದೆ.

ಅದರ ಮಂಜೂರಾತಿಗೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕಲಾಗುವುದು. ಕೂಡಲ ಸಂಗಮದಲ್ಲಿ ವಿಶ್ವದರ್ಜೆಯ ವಸ್ತುಸಂಗ್ರಹಾಲಯ ನಿರ್ಮಾಣಕ್ಕೆ ₹ 140 ಕೋಟಿ ಮಂಜೂರು ಮಾಡಲಾಗಿದೆ. ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರ ಉದ್ಧಾರಕ್ಕಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT