ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇತಿಹಾಸವನ್ನು ಬದಲಿಸುತ್ತೇವೆ: ಬಿಜೆಪಿ ಶಾಸಕ ಸಂಗೀತ್‌ ಸೋಮ್ ವಿವಾದಿತ ಹೇಳಿಕೆ

Last Updated 16 ಅಕ್ಟೋಬರ್ 2017, 6:02 IST
ಅಕ್ಷರ ಗಾತ್ರ

ಲಖನೌ: ಭಾರತೀಯ ಸಂಸ್ಕೃತಿಯಲ್ಲಿ ತಾಜ್‌ ಮಹಲ್ ಒಂದು ಕಪ್ಪು ಚುಕ್ಕೆ ಎಂದು ಬಿಜೆಪಿ ಶಾಸಕ ಸಂಗೀತ್ ಸೋಮ್ ಹೇಳಿರುವುದು ವಿವಾದಕ್ಕೆ ಗುರಿಯಾಗಿದೆ.

‘ಉತ್ತರ ಪ್ರದೇಶ ಸರ್ಕಾರ ಸಾಂಸ್ಕೃತಿಕ ಪರಂಪರೆಯ ಪಟ್ಟಿಯಿಂದ ತಾಜ್‌ ಮಹಲ್ ಅನ್ನು ತೆರವು ಮಾಡಿರುವುದರಿಂದ ಹಲವರಿಗೆ ಹತಾಶೆಯಾಗಿದೆ. ಯಾವ ಇತಿಹಾಸದ ಬಗ್ಗೆ ನಾವು ಮಾತನಾಡುತ್ತಿದ್ದೇವೆ? ತಾಜ್‌ ಮಹಲ್ ಕಟ್ಟಿಸಿದ್ದ ಷಹಜಹಾನ್ ತನ್ನ ತಂದೆಯನ್ನೇ ಜೈಲಿಗಟ್ಟಿದ್ದ. ಹಿಂದೂಗಳನ್ನು ಇಲ್ಲವಾಗಿಸಲು ಬಯಸಿದ್ದ. ಇಂಥ ವ್ಯಕ್ತಿಗಳು ನಮ್ಮ ಇತಿಹಾಸದ ಭಾಗವಾದರೆ, ಇದು ಬಹಳ ಖೇದಕರ. ಹಾಗೂ ನಾವು ಇತಿಹಾಸವನ್ನು ಬದಲಿಸುತ್ತೇವೆ’ ಎಂದು ಸೋಮ್ ಹೇಳಿದ್ದಾರೆ. ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಉತ್ತರ ಪ್ರದೇಶ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ್ದ ಸಾಂಸ್ಕೃತಿಕ ಪರಂಪರೆಯ ಪಟ್ಟಿಯಿಂದ ತಾಜ್‌ ಮಹಲ್ ಅನ್ನು ಕೈಬಿಡಲಾಗಿತ್ತು. ಈ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT