ಇಸ್ಪೀಟ್ ಅಡ್ಡೆಯ ಮೇಲೆ ದಾಳಿ: 6 ಮಂದಿ ವಶಕ್ಕೆ

ಭಾನುವಾರ, ಜೂನ್ 16, 2019
22 °C

ಇಸ್ಪೀಟ್ ಅಡ್ಡೆಯ ಮೇಲೆ ದಾಳಿ: 6 ಮಂದಿ ವಶಕ್ಕೆ

Published:
Updated:

ಕಾರವಾರ: ಅಂಕೋಲಾ ತಾಲ್ಲೂಕಿನ ಅಂದ್ಲೆ ಸೀ ಫುಡ್‌ ಫ್ಯಾಕ್ಟರಿ ಬಳಿಯ ಮಾವಿನ ತೋಟದಲ್ಲಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆಯ ಮೇಲೆ ಶನಿವಾರ ಪೊಲೀಸರು ದಾಳಿ ನಡೆಸಿದ್ದು, 6 ಮಂದಿಯನ್ನು ಬಂಧಿಸಿ ₹ 23,660 ನಗದು, 3 ಕಾರು, 7 ಬೈಕ್, ಒಂದು ಆಟೋವನ್ನು ವಶ ಪಡಿಸಿಕೊಂಡಿದ್ದಾರೆ.

ಅಡ್ಡೆಯಲ್ಲಿ ಇದ್ದ ಸುಮಾರು 15ಕ್ಕೂ ಅಧಿಕ ಮಂದಿಯಲ್ಲಿ ವಿನಾಯಕ ನಾಯ್ಕ, ಮಾನೇಶ್ವರ ಪಟಗಾರ, ಗಿರಿಧರ ಬಂಟ, ಇಕ್ಬಾಲ್ ಶೇಖ್, ಸುರೇಶ ಕಡ್ಲೆಗುಂದಿ, ರಾಜೇಶ ಗೌಡ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಉಳಿದವರು ಪರಾರಿಯಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ವಿ.ಪಾಟೀಲ್ ನೇತೃತ್ವದಲ್ಲಿ ಡಿಸಿಐಬಿ ಪೊಲೀಸ್ ಇನ್‌ಸ್ಪೆಕ್ಟರ್ ರಂಗನಾಥ, ಡಿಸಿಬಿ ಇನ್‌ಸ್ಪೆಕ್ಟರ್ ಶರಣಗೌಡ ಪಾಟೀಲ್ ಹಾಗೂ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದರು ಎಂದು ಅಂಕೋಲಾ ವೃತ್ತ ನಿರೀಕ್ಷಕ ಬಸಪ್ಪ ಬುರ್ಲಿ ಮಾಹಿತಿ ನೀಡಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry