ಶಾಸಕರಿಗೆ ಚಿನ್ನದ ಬಿಸ್ಕತ್‌, ಸಿಬ್ಬಂದಿಗೆ ಬೆಳ್ಳಿತಟ್ಟೆ ನೀಡುವ ಯಾವುದೆ ಪ್ರಸ್ತಾಪವಿಲ್ಲ: ಕೆ.ಬಿ. ಕೋಳಿವಾಡ

ಗುರುವಾರ , ಜೂನ್ 20, 2019
31 °C

ಶಾಸಕರಿಗೆ ಚಿನ್ನದ ಬಿಸ್ಕತ್‌, ಸಿಬ್ಬಂದಿಗೆ ಬೆಳ್ಳಿತಟ್ಟೆ ನೀಡುವ ಯಾವುದೆ ಪ್ರಸ್ತಾಪವಿಲ್ಲ: ಕೆ.ಬಿ. ಕೋಳಿವಾಡ

Published:
Updated:
ಶಾಸಕರಿಗೆ ಚಿನ್ನದ ಬಿಸ್ಕತ್‌, ಸಿಬ್ಬಂದಿಗೆ ಬೆಳ್ಳಿತಟ್ಟೆ ನೀಡುವ ಯಾವುದೆ ಪ್ರಸ್ತಾಪವಿಲ್ಲ: ಕೆ.ಬಿ. ಕೋಳಿವಾಡ

ಬೆಂಗಳೂರು: ಸ್ಪೀಕರ್‌ ಕಚೇರಿ ಮತ್ತು ಸರ್ಕಾರದ ತಿಕ್ಕಾಟದ ನಡುವೆಯೆ ನಡೆಯುತ್ತಿರುವ ವಿಧಾನಸೌಧ ವಜ್ರಮಹೋತ್ಸವದ ಸವಿನೆನಪಿಗಾಗಿ ಶಾಸಕರಿಗೆ ತಲಾ ₹50,000 ಮೌಲ್ಯದ ಚಿನ್ನದ ಬಿಸ್ಕತ್‌, ಸಿಬ್ಬಂದಿಗೆ ತಲಾ ₹5,000 ಮೌಲ್ಯದ ಬೆಳ್ಳಿ ತಟ್ಟೆ ಉಡುಗೊರೆಯಾಗಿ ನೀಡಲು ಉದ್ದೇಶಿಸಲಾಗಿದೆ ಎಂದು ಹೇಳಲಾಗಿತ್ತು. ಈಗ ಇಂತಹ ಯಾವುದೆ ಪ್ರಸ್ತಾಪ ಇಲ್ಲ ಎಂದು ಸ್ಪೀಕರ್‌ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ವಿಧಾನಸಭೆ ಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಅವರು, ‘ಶಾಸಕರಿಗೆ ಚಿನ್ನದ ಬಿಸ್ಕತ್‌, ಸಿಬ್ಬಂದಿಗೆ ಬೆಳ್ಳಿತಟ್ಟೆ ನೀಡುವ ಯಾವುದೆ ಪ್ರಸ್ತಾಪವಿಲ್ಲ’ ಎಂದು ಹೇಳಿದ್ದಾರೆ.

ವಿಧಾನಮಂಡಲದ ಉಭಯ ಸದನಗಳ 300 ಸದಸ್ಯರಿಗೆ ವಿಧಾನಸೌಧದ ಲಾಂಛನ ಒಳಗೊಂಡಿರುವ ಚಿನ್ನದ ಬಿಸ್ಕತ್‌ಗಳನ್ನು ಕೊಡಲು ಚಿಂತಿಸಲಾಗಿದೆ. ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ, ರಾಜಭವನ ಮತ್ತು ವಿಶ್ವೇಶ್ವರಯ್ಯ ಗೋಪುರಗಳಲ್ಲಿ ಕೆಲಸ ಮಾಡುವ ಸುಮಾರು ಐದು ಸಾವಿರ ಸಿಬ್ಬಂದಿಗೆ ಬೆಳ್ಳಿ ತಟ್ಟೆಗಳನ್ನು ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿದ್ದಾಗಿ ವರದಿಯಾಗಿತ್ತು.

ಇದನ್ನೂ ಓದಿ...

ಶಾಸಕರಿಗೆ ಚಿನ್ನದ ಬಿಸ್ಕತ್‌, ಸಿಬ್ಬಂದಿಗೆ ಬೆಳ್ಳಿತಟ್ಟೆ: ಬಂಪರ್‌ ಉಡುಗೊರೆ

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry