ಮಳೆ; ಮನೆಗೋಡೆ ಕುಸಿತ

ಶುಕ್ರವಾರ, ಮೇ 24, 2019
22 °C

ಮಳೆ; ಮನೆಗೋಡೆ ಕುಸಿತ

Published:
Updated:

ಕೊಪ್ಪ: ಹೋಬಳಿಯ ಕೆಲವು ಗ್ರಾಮಗಳಲ್ಲಿ ಶನಿವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಮನೆಯ ಗೋಡೆ ಕುಸಿದಿದ್ದು, ಅಕ್ಕಪಕ್ಕದ ಮನೆಗಳೂ ಕುಸಿಯುವ ಭೀತಿಯಲ್ಲಿವೆ. ಕೆಲವೆಡೆ ಮರಗಳು ರಸ್ತೆಗೆ ಉರುಳಿ ಕೆಲಕಾಲ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.

ಬೆಸಗರಹಳ್ಳಿ ಗ್ರಾಮದ 2ನೇ ವಾರ್ಡ್‌ನ ಮನೆಗಳು ಒಂದಾದ ಮೇಲೋಂದು ಕುಸಿದು ಬಿಳುತ್ತಿದ್ದು ನಾಗರಿಕರು ಆತಂಕಕ್ಕೆ ಒಳಾಗಿದ್ದಾರೆ. ಕೆಲವು ಮನೆಗಳಲ್ಲಿ ವಾಸ ಮಾಡುವುದಕ್ಕೂ ತೊಂದರೆ ಆಗಿದೆ.

ಬೆಸಗರಹಳ್ಳಿ ಗ್ರಾಮದ ಮೇರಿಯಮ್ಮ ಅವರಿಗೆ ಸೇರಿದ ಮನೆಯ ಗೋಡೆ ಕುಸಿದು ₹ 10 ಸಾವಿರಕ್ಕೂ ಹೆಚ್ಚು ನಷ್ಟವಾಗಿದೆ. ಕೋಡಗಹಳ್ಳಿ ಮಹಾದೇವ, ರಂಗಮ್ಮ, ಆರೋಗ್ಯ ಮೇರಿ ಅವರ ಮನೆಗಳು ಕುಸಿಯುವ ಹಂತ ತಲುಪಿವೆ.

65 ವರ್ಷಗಳಿಂದ ವಾಸಿಸುತ್ತಿದ್ದು, ಹಕ್ಕುಪತ್ರ ನೀಡಿಲ್ಲ. ಮನೆ ಕಟ್ಟಿಕೊಳ್ಳಲಾಗದೆ ತೊಂದರೆ ಅನುಭವಿಸುತ್ತಿದ್ದೇವೆ ಎಂದು ಮೇರಿಯಮ್ಮ ಅಳಲು ತೋಡಿಕೊಂಡರು.

ಕೌಡ್ಲೆ, ಹಳೇಹಳ್ಳಿ, ಬೆಕ್ಕಳಲೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಶನಿವಾರ ರಾತ್ರಿ ಮರಗಳು ಉರುಳಿಬಿದ್ದು ಸಂಚಾರಕ್ಕೆ ತೊಂದರೆಯಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry