ರೈಲ್ವೆ ಗೇಟ್‌ಮನ್‌ ಅಮಾನತು

ಸೋಮವಾರ, ಜೂನ್ 24, 2019
26 °C

ರೈಲ್ವೆ ಗೇಟ್‌ಮನ್‌ ಅಮಾನತು

Published:
Updated:

ಬೆಳಗಾವಿ:‌ ಇಲ್ಲಿನ 2ನೇ ರೈಲ್ವೆ ಗೇಟ್‌ನಲ್ಲಿ ರೈಲಿಗೆ ಸಿಗ್ನಲ್‌ ಕೊಡದೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಗೇಟ್‌ಮನ್‌ ಬಸವರಾಜ ಮೋದಗಿ ಅವರನ್ನು ಅಮಾನತು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಇ.ವಿಜಯಾ ತಿಳಿಸಿದ್ದಾರೆ.

ಕರ್ತವ್ಯದಲ್ಲಿದ್ದಾಗ ನಿದ್ದೆ ಮಾಡಿದ್ದರಿಂದ ನಿಜಾಮುದ್ದೀನ್‌ ರೈಲು ಶನಿವಾರ ತಡರಾತ್ರಿ 10 ನಿಮಿಷಕ್ಕೂ ಹೆಚ್ಚು ಕಾಲ ನಿಂತಿತ್ತು. ಇದು ಸಾಮಾಜಿಕ ಜಾಲ ತಾಣದಲ್ಲಿ ವೈರಲ್‌ ಆಗಿದ್ದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ನಿದ್ದೆ ಮಾಡಿದ್ದು ಗೇಟ್‌ಮನ್‌. ರೈಲ್ವೆ ಗಾರ್ಡ್‌ ಅಲ್ಲ’ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry