ಸೋಮವಾರ, ಸೆಪ್ಟೆಂಬರ್ 16, 2019
21 °C

ಅನಂತ್‌ಕುಮಾರ್ ಭೇಟಿ ಮಾಡಿದ ಸಚಿವ ಪ್ರಮೋದ್‌

Published:
Updated:
ಅನಂತ್‌ಕುಮಾರ್ ಭೇಟಿ ಮಾಡಿದ ಸಚಿವ ಪ್ರಮೋದ್‌

ಉಡುಪಿ: ಸಚಿವ ಪ್ರಮೋದ್ ಮಧ್ವರಾಜ್ ಅವರು ಉಡುಪಿಯ ಪ್ರವಾಸಿ ಮಂದಿರದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರನ್ನು ಸೋಮವಾರ ಭೇಟಿ ಮಾಡಿದರು.

ಬ್ರಹ್ಮಾವರದಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಉಡುಪಿಗೆ ಬಂದಿದ್ದ ಕೇಂದ್ರ ಸಚಿವರು ಪ್ರವಾಸಿ ಮಂದಿರದಲ್ಲಿ ಕೆಲ ಕಾಲ ಉಳಿದಿದ್ದರು. ಆ ಸಂದರ್ಭದಲ್ಲಿಯೇ ಪ್ರಮೋದ್ ಅವರೂ ಪ್ರವಾಸಿ ಮಂದಿರಕ್ಕೆ ಹೋದಾಗ ಭೇಟಿ ಮಾಡಿದರು. ಕೆಲ ಹೊತ್ತು ಲೋಕಾಭಿರಾಮವಾಗಿ ಮಾತನಾಡಿದರು ಎಂದು ತಿಳಿದು ಬಂದಿದೆ.

ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ವಿ. ಸುನೀಲ್ ಕುಮಾರ್ ಇದ್ದರು.

ಪ್ರಮೋದ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ.

Post Comments (+)