ಕಾರು ಅಡ್ಡಗಟ್ಟಿ ₹ 20 ಲಕ್ಷ ದರೋಡೆ

ಗುರುವಾರ , ಜೂನ್ 20, 2019
26 °C

ಕಾರು ಅಡ್ಡಗಟ್ಟಿ ₹ 20 ಲಕ್ಷ ದರೋಡೆ

Published:
Updated:

ಬೆಂಗಳೂರು: ಹೊಸಕೆರೆಹಳ್ಳಿ ನೈಸ್ ರಸ್ತೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿದ ದುಷ್ಕರ್ಮಿಗಳು ₹20 ಲಕ್ಷ ನಗದು ದೋಚಿದ್ದಾರೆ.

ಚಾಮರಾಜನಗರದ ಗುಂಡ್ಲುಪೇಟೆಯಿಂದ ನಗರಕ್ಕೆ ಬಂದಿದ್ದ ಕರೀಂ, ರಿಯಾಜ್ ಹಣ ಕಳೆದುಕೊಂಡಿದ್ದಾರೆ. ಜಮೀನು ಖರೀದಿಗೆ ಅವರು ಹಣವನ್ನು ತೆಗೆದುಕೊಂಡು ಕಾರಿನಲ್ಲಿ ಹೋಗುತ್ತಿದ್ದರು. ಬೈಕ್‌ನಲ್ಲಿ ವೇಗವಾಗಿ ಬಂದು ದುಷ್ಕರ್ಮಿಗಳಿಬ್ಬರು ಕಾರನ್ನು ಅಡ್ಡಗಟ್ಟಿ ಹಣ ದೋಚಿದ್ದಾರೆ. ಬಳಿಕ ಕರೀಂ ಅವರು ಠಾಣೆಗೆ ದೂರು ನೀಡಿದ್ದಾರೆ.

ಪರಿಚಯಸ್ಥರಿಂದ ಈ ಕೃತ್ಯ ನಡೆದಿರುವ ಶಂಕೆ ಇದೆ. ಘಟನೆ ನಡೆದ ಸ್ಥಳದ ಸುತ್ತಮುತ್ತಲಿನ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದೇವೆ ಬ್ಯಾಟರಾಯನಪುರ ಪೊಲೀಸರು ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry