ಗೋವು ಸಾಗಣೆ: 7 ಮಂದಿ ಸೆರೆ

ಬುಧವಾರ, ಜೂನ್ 26, 2019
28 °C

ಗೋವು ಸಾಗಣೆ: 7 ಮಂದಿ ಸೆರೆ

Published:
Updated:

ಬೆಂಗಳೂರು: ಗೋವುಗಳ ಕಳ್ಳ ಸಾಗಣೆ ಪ್ರಕರಣ ಸಂಬಂಧ ತಲಘಟ್ಟಪುರ ಪೊಲೀಸರು ಏಳು ಮಂದಿ ಆರೋಪಿಗಳನ್ನು ಸೋಮವಾರ ಬಂಧಿಸಿದ್ದಾರೆ.

ಆವಲಹಳ್ಳಿ ಮುಖ್ಯರಸ್ತೆಯಲ್ಲಿ ಶನಿವಾರ ರಾತ್ರಿ 9 ಗಂಟೆಯ ಸುಮಾರಿಗೆ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಬಗ್ಗೆ ನಂದಿನಿ ಪೊಲೀಸರಿಗೆ ದೂರು ನೀಡಿದ್ದರು. ಇದೇ ಕಾರಣಕ್ಕೆ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಅವರು ಆರೋಪಿಸಿದ್ದರು.

ಅರ್ಶಾಫ್(33), ಜಾವೇದ್ ಪಾಷಾ (35) ಸಮೀರ್ (32) ಶೇಖ್ ಅಹ್ಮದ್ (25), ಮೌಲಾ (33), ಫೈಜಾ ಖಾನ್ (50), ರಜಾಕ್ (37) ಬಂಧಿಸಲಾಗಿದೆ. ದೂರು ದಾಖಲಾದ ಬಳಿಕ ಸ್ಥಳಕ್ಕೆ ಹೋಗಿ, ಅಲ್ಲಿದ್ದ ಗೋವುಗಳನ್ನು ರಕ್ಷಿಸಿದ್ದೇವೆ. ನಮ್ಮ ಕಾರ್ಯಾಚರಣೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ಸ್ಥಳಕ್ಕೆ ಹೋಗಿ ನಂದಿನಿ ಅವರು ಪರಿಶೀಲಿಸುವ ಅಗತ್ಯವಿರಲಿಲ್ಲ ಎಂದು ತಲಘಟ್ಟಪುರ ಪೊಲೀಸರು ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry