ಎಸ್‌ಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮುಲಾಯಂ, ಶಿವಪಾಲ್‌ ಹೆಸರಿಲ್ಲ

ಮಂಗಳವಾರ, ಜೂನ್ 18, 2019
26 °C

ಎಸ್‌ಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮುಲಾಯಂ, ಶಿವಪಾಲ್‌ ಹೆಸರಿಲ್ಲ

Published:
Updated:

ಲಖನೌ: ಸಮಾಜವಾದಿ ಪಕ್ಷವು ಸೋಮವಾರ 55 ಸದಸ್ಯರಿರುವ ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಪಟ್ಟಿಯಲ್ಲಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್‌ ಯಾದವ್ ಮತ್ತು ಅವರ ಸಹೋದರ ಶಿವಪಾಲ್‌ ಸಿಂಗ್ ಯಾದವ್‌ ಅವರ ಹೆಸರನ್ನು ಕೈಬಿಡಲಾಗಿದೆ.

ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ಪೋಷಕರಾಗಿ ಮುಂದುವರಿಯಲಿದ್ದಾರೆ ಎಂಬ ಕುತೂಹಲ ಇತ್ತು. ಈ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಯಾವುದೇ ಸ್ಥಾನ ನೀಡುವ ಬಗ್ಗೆ ಪಕ್ಷದಲ್ಲಿ ನಿರ್ಧಾರವಾಗಿಲ್ಲ ಎಂದು ಪಕ್ಷದ ವಕ್ತಾರ ರಾಜೇಂದ್ರ ಚೌಧರಿ ಹೇಳಿದ್ದಾರೆ.

ಜನವರಿ 1 ರಂದು ನಡೆದ ತುರ್ತು ರಾಷ್ಟ್ರೀಯ ಅಧಿವೇಶನದಲ್ಲಿ ಅಖಿಲೇಶ್ ಯಾದವ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಆ ನಂತರ ಮುಲಾಯಂ ಸಿಂಗ್‌ ಪಕ್ಷದ ಪೋಷಕರಾಗಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry