ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರುದ್ರೇಶ್ ಹತ್ಯೆ ಖಂಡಿಸಿ ಪ್ರತಿಭಟನೆ

Last Updated 16 ಅಕ್ಟೋಬರ್ 2017, 19:54 IST
ಅಕ್ಷರ ಗಾತ್ರ

ಬೆಂಗಳೂರು: ಶಿವಾಜಿನಗರದಲ್ಲಿ ನಡೆದಿದ್ದ ಆರ್‌ಎಸ್‌ಎಸ್‌ ಕಾರ್ಯಕರ್ತ ರುದ್ರೇಶ್‌ ಹತ್ಯೆ ನಡೆದು ಒಂದು ವರ್ಷವಾದ ಹಿನ್ನೆಲೆ ಸಿಟಿಜನ್ಸ್ ಫಾರ್ ಡೆಮಾಕ್ರಸಿ ಸಂಘಟನೆ, ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರು ಕಪ್ಪಪಟ್ಟಿ ಧರಿಸಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಆಕ್ರೋಶ ದಿನ’ ಹೆಸರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಸದ ಪಿ.ಸಿ.ಮೋಹನ್, ಶಾಸಕ ಬಿ.ಎನ್‌.ವಿಜಯಕುಮಾರ್‌, ಬಿಜೆಪಿ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ವಿಧಾನ ಪರಿಷತ್ ಸದಸ್ಯೆ ತಾರಾ ಅನೂರಾಧ, ರುದ್ರೇಶ್ ಪತ್ನಿ ವಿದ್ಯಾ ಹಾಗೂ ತಾಯಿ ಸರಸ್ವತಿ ಭಾಗವಹಿಸಿದ್ದರು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಹಾಗೂ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಂಘಟನೆಗಳ ಕಾರ್ಯಕರ್ತರು ಹಿಂದೂ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ಹತ್ಯೆ ಮಾಡುತ್ತಿದ್ದಾರೆ. ಹೀಗಾಗಿ, ಅವುಗಳನ್ನು ನಿಷೇಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದೇ ಇಂಥ ಘಟನೆಗಳಿಗೆ ಕಾರಣ ಎಂದು ಸಂಸದ ಮೋಹನ್ ಆರೋಪಿಸಿದರು.

ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಬಾರದು. ಪಾರದರ್ಶಕ ತನಿಖೆ ನಡೆಸಲು ಪೊಲೀಸರಿಗೆ ಸ್ವಾತಂತ್ರ್ಯ ನೀಡಬೇಕು. ದಕ್ಷ ಅಧಿಕಾರಿಗಳನ್ನು ವರ್ಗಾವಣೆ ಮಾಡುವುದನ್ನು ನಿಲ್ಲಿಸಬೇಕು ಎಂದು ಶಾಸಕ ಬಿ.ಎನ್‌.ವಿಜಯಕುಮಾರ್‌ ಒತ್ತಾಯಿಸಿದರು.

ಪಿಎಫ್‌ಐ ಹಾಗೂ ಎಸ್‌ಡಿಪಿಐ ನಿಷೇಧಿಸುವಂತೆ ಕೋರಿ ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಮನವಿ ಸಲ್ಲಿಸಲು ಕಾರ್ಯಕರ್ತರು ಮುಂದಾದರು. ಈ ವೇಳೆ ಅವರನ್ನು ತಡೆದ ಪೊಲೀಸರನ್ನು ದೂಡಿ ರಾಜಭವನದತ್ತ ನುಗ್ಗಲು ಕಾರ್ಯಕರ್ತರು ಯತ್ನಿಸಿದರು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಅವರನ್ನು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT