ಕೋಟ್ಯಂತರ ರೂಪಾಯಿ ವಂಚನೆ ಆರೋಪ: ದಂಪತಿ ಆತ್ಮಹತ್ಯೆ

ಮಂಗಳವಾರ, ಜೂನ್ 18, 2019
25 °C

ಕೋಟ್ಯಂತರ ರೂಪಾಯಿ ವಂಚನೆ ಆರೋಪ: ದಂಪತಿ ಆತ್ಮಹತ್ಯೆ

Published:
Updated:
ಕೋಟ್ಯಂತರ ರೂಪಾಯಿ ವಂಚನೆ ಆರೋಪ: ದಂಪತಿ ಆತ್ಮಹತ್ಯೆ

ತುಮಕೂರು: ಚೀಟಿ ವ್ಯವಹಾರದಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪ ಎದುರಿಸುತ್ತಿದ್ದ ದಂಪತಿ ಕೊರಟಗೆರೆ ಪಟ್ಟಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿ(47), ಪ್ರಭಾವತಿ(43)  ಆತ್ಮಹತ್ಯೆ ಮಾಡಿಕೊಂಡವರು.

ರವಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಭಾವತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿ ಬೆಸ್ಕಾಂ ನೌಕರರಾಗಿದ್ದರು. ಚೀಟಿ ವ್ಯವಹಾರದಲ್ಲಿ ವಂಚನೆ ಮಾಡಿದ ಪ್ರಕರಣದಲ್ಲಿ ಬಂಧಿತರಾದ ಬಳಿಕ ಅಮಾನತುಗೊಂಡಿದ್ದರು. ತುಮಕೂರು, ದೊಡ್ಡಬಳ್ಳಾಪುರ, ಬೆಂಗಳೂರು ಸೇರಿ ವಿವಿಧ ಜಿಲ್ಲೆಯಲ್ಲಿ ಇವರು ಚೀಟಿ ವ್ಯವಹಾರ ನಡೆಸಿದ್ದರು. ಈ ವ್ಯವಹಾರದಲ್ಲಿ ವಂಚನೆ ಮಾಡಿದ್ದಾರೆ ಎಂದು ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈಚೆಗೆ , ಜಾಮೀನಿನ ಮೇಲೆ ಹೊರ ಬಂದಿದ್ದರು. ದಂಪತಿಗೆ ಮಕ್ಕಳಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry