ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು

Last Updated 17 ಅಕ್ಟೋಬರ್ 2017, 5:16 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಕೃಷಿಯಲ್ಲಿ ಮಹಿಳೆ ಯರ ಪಾತ್ರ ಮಹತ್ವದ್ದಾಗಿದೆ. ಶೇ 80ರಷ್ಟು ಮಹಿಳೆಯರು ಕೃಷಿ ಕ್ಷೇತ್ರದಲ್ಲಿ ಉದ್ಯೋಗಿಗಳಾಗಿದ್ದಾರೆ ಎಂದು ಕೃಷಿ ವಿಜ್ಞಾನ ಕೇಂದ್ರದ ವಿಷಯ ತಜ್ಞೆ ಡಾ. ಸವಿತಾ ಹೇಳಿದರು.

ತಾಲ್ಲೂಕಿಗೆ ಸಮೀಪದ ಬನ್ನಿಮಂಗ ಲದಲ್ಲಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ನಡೆದ ಮಹಿಳಾ ಕಿಸಾನ್ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಶೇ 18ರಷ್ಟು ಕೃಷಿ ಕುಟುಂಬಗಳಲ್ಲಿ ಮಹಿಳೆಯರು ಪ್ರಧಾನವಾಗಿ ಮುನ್ನಡೆಸುತ್ತಿದ್ದಾರೆ. ಇದಲ್ಲದೇ ಹೈನುಗಾರಿಕೆಯಲ್ಲಿಯೂ ಮಹಿಳೆ ಪ್ರಧಾನ ಪಾತ್ರ ವಹಿಸಲಿದ್ದಾರೆ ಎಂದರು.

ಮಹಿಳೆಯರಿಗಾಗಿ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಹೈನುಗಾರಿಕೆಯಲ್ಲಿ ತೊಡಗಿಕೊಳ್ಳುವ ಮೂಲಕ ಹಾಲಿನ ಡೈರಿಗಳಿಗೆ ಹೆಚ್ಚು ಹಾಲು ಸರಬರಾಜು ಮಾಡಿದ ಮಹಿಳೆ ಯರಿಗೆ ವಿಶೇಷ ಬಹುಮಾ ನಗಳನ್ನು ನೀಡಲಾಯಿತು. ಕೃಷಿ ವಿಜ್ಞಾನ ಕೇಂದ್ರದ ವಿಷಯ ತಜ್ಞೆ ಡಾ.ಬಿ.ಜಿ.ವಾಸಂತಿ ಭಾಗವಹಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT