ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸೌಧ ವಜ್ರಮೋತ್ಸವ: ₹26 ಕೋಟಿ ಕೊಡಲು ಸಾಧ್ಯವಿಲ್ಲ; ₹10 ಕೋಟಿ ವೆಚ್ಚದಲ್ಲಿ ಮುಗಿಸಿ– ಸಿಎಂ ಸೂಚನೆ

Last Updated 17 ಅಕ್ಟೋಬರ್ 2017, 5:57 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸೌಧ ವಜ್ರಮೋತ್ಸವ ಕಾರ್ಯಕ್ರಮವನ್ನು ₹10 ಕೋಟಿ ವೆಚ್ಚದಲ್ಲಿ ಮುಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸೂಚನೆ ನೀಡಿದ್ದಾರೆ.

ಶಾಸಕರಿಗೆ ಉಡುಗೊರೆ ಬೇಡ ಎಂದು ಹೇಳಿದ ಸಿದ್ದರಾಮಯ್ಯ ಅವರು, ವಜ್ರಮಹೋತ್ಸವ ಕಾರ್ಯಕ್ರಮವನ್ನು ಒಂದು ದಿನಕ್ಕೆ ನಿಗದಿ ಮಾಡಲು ಸೂಚಿಸಿದರು.

ಕಾರ್ಯಕ್ರಮಕ್ಕೆ ₹26 ಕೋಟಿ ಬಿಡುಗಡೆ ಮಾಡಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟವಾಗಿ ಹೇಳಿದರು.

ವಿಧಾನಸೌಧ ವಜ್ರ ಮಹೋತ್ಸವದ ಸವಿನೆನಪಿಗಾಗಿ ಶಾಸಕರು, ಸಂಸತ್‌ ಸದಸ್ಯರು ಮತ್ತು ವಿಧಾನಮಂಡಲ ಉಭಯ ಸಚಿವಾಲಯಗಳ ಸಿಬ್ಬಂದಿಗೆ ಉಡುಗೊರೆ ನೀಡಲು ಮಾಡುತ್ತಿರುವ ಖರ್ಚಿನ ಕುರಿತು ವ್ಯಾಪಕ ಟೀಕೆಗಳು ವ್ಯಕ್ತವಾಗಿರುವ ಬೆನ್ನಲ್ಲೇ ವಿಧಾನಸಭಾಧ್ಯಕ್ಷ ಕೋಳಿವಾಡ ಚಿನ್ನದ ಬಿಸ್ಕತ್ತೂ ಇಲ್ಲ, ಬೆಳ್ಳಿ ತಟ್ಟೆನೂ ಇಲ್ಲ ಎಂದು ಸೋಮವಾರ ಹೇಳಿದ್ದರು.

ಇದೇ 25 ಮತ್ತು 26ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ನೆನಪಿನ ಕಾಣಿಕೆಯಾಗಿ ಜನಪ್ರತಿನಿಧಿಗಳಿಗೆ ಚಿನ್ನದ ಬಿಸ್ಕತ್‌, ಸಿಬ್ಬಂದಿಗೆ ಬೆಳ್ಳಿತಟ್ಟೆ ಕೊಡುವ ಯಾವುದೇ ಪ್ರಸ್ತಾವ ಇಲ್ಲ’ ಎಂದು ಕೋಳಿವಾಡ ಅವರು ಮಾತು ಬದಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT