ಬಿಸಿಲು ಮಾರಮ್ಮ ದೇವಸ್ಥಾನದ ವಾರ್ಷಿಕೋತ್ಸವ

ಬುಧವಾರ, ಜೂನ್ 19, 2019
28 °C

ಬಿಸಿಲು ಮಾರಮ್ಮ ದೇವಸ್ಥಾನದ ವಾರ್ಷಿಕೋತ್ಸವ

Published:
Updated:

ಸಂತೇಮರಹಳ್ಳಿ: ಇಲ್ಲಿನ ಆದಿಜಾಂಬ ವರ ಬಡಾವಣೆಯಲ್ಲಿ ಗ್ರಾಮದೇವತೆ ಬಿಸಲು ಮಾರಮ್ಮ ದೇವಿಯ 2ನೇ ವಾರ್ಷಿಕೋತ್ಸವ ಸೋಮವಾರ ನಡೆಯಿತು. ಭಾನುವಾರ ಸಂಜೆ ಮಹದೇಶ್ವರ ಸ್ವಾಮಿ ದೇವಸ್ಥಾನದಿಂದ ಮಂಟೇಸ್ವಾಮಿ ಕಂಡಾಯ ಮತ್ತು ಬಿಳಿಗಿರಿ ರಂಗಸ್ವಾಮಿಯ ಹರಿಗೆ ಹಾಗೂ ಬಿಸಿಲು ಮಾರಮ್ಮನ ಮೂರ್ತಿಯನ್ನು ವಿವಿಧ ಹೂ ಹೊಂಬಾಳೆಯಿಂದ ಅಲಂಕರಿಸಿ ಗ್ರಾಮದ ಬೀದಿಗಳಲ್ಲಿ ತಮಟೆ ಹಾಗೂ ವಾದ್ಯ ಮೇಳಗಳೊಂದಿಗೆ ಮೆರವಣಿಗೆ ನಡೆಸಲಾಯಿತು.

ಮಹಿಳೆಯರು ತಂಬಿಟ್ಟಿನ ಆರತಿ ಹಿಡಿದು ಬಿಸಿಲು ಮಾರಮ್ಮನ ದೇವಸ್ಥಾನಕ್ಕೆ ಮೆರವಣಿಗೆ ಮಾಡಿದರು. ದೇವರಿಗೆ ಆರತಿಯನ್ನು ಬೆಳಗಿ ಮಹಾ ಮಂಗಳಾರತಿ ನೆರವೇರಿಸಲಾಯಿತು. ಸುತ್ತಮುತ್ತಲಿನ ಗ್ರಾಮಗಳಿಂದ ಬಂದಿದ್ದ ಜನರು ದೇವಸ್ಥಾನದ ಪೂಜಾ ಕಾರ್ಯದಲ್ಲಿ ಭಾಗಿಯಾದರು.

ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಯಿತು. ಗ್ರಾಮದ ಬೀದಿಗಳಲ್ಲಿ ಧ್ವನಿ ವರ್ಧಕಗಳನ್ನು ಅಳವಡಿಸಿ ವಿದ್ಯುತ್ ದೀಪಗಳಿಂದ ಕಂಗೊಳಿಸಲಾಗಿತ್ತು. ಗ್ರಾಮಸ್ಥರು ಸಂಭ್ರಮದಿಂದ ಹಬ್ಬ ಆಚರಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry