ಬಿದಿರೆ: ಹಲವರು ಬಿಜೆಪಿ ಸೇರ್ಪಡೆ

ಗುರುವಾರ , ಜೂನ್ 27, 2019
26 °C

ಬಿದಿರೆ: ಹಲವರು ಬಿಜೆಪಿ ಸೇರ್ಪಡೆ

Published:
Updated:

ಬಿದಿರೆ (ಬಾಳೆಹೊನ್ನೂರು): ಇಲ್ಲಿನ ಗ್ರಾಮ ಪಂಚಾಯಿತಿ ಬಳಿಯ ಸಮುದಾಯ ಭವನದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಸುಮಾರು 48 ಕಾರ್ಯಕರ್ತರು ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ತೊರೆದು ಶಾಸಕ ಡಿ.ಎನ್.ಜೀವರಾಜ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ಡಿ.ಎನ್.ಜೀವರಾಜ್ ಮಾತನಾಡಿ, ‘ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಗಮನಿಸಿ ಮತದಾರರು ಕಾಂಗ್ರೆಸ್, ಜೆಡಿಎಸ್ ತ್ಯಜಿಸಿ ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ. ಈ ಭಾಗ ಸಂಪರ್ಕಿಸುವ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಹಣ ಬಿಡುಗಡೆಯಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ’ ಎಂದರು.

ಬಿದಿರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಶಿವದಾಸ್, ಬಿ.ಪ್ರಭಾಕರ್, ಶಶಿಧರ್ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆಗೊಂಡರು. ನರಸಿಂಹರಾಜಪುರ ತಾಲ್ಲೂಕು ಬಿಜೆಪಿ ಅಧ್ಯಕ್ಷ ವೆನಿಲ್ಲಾ ಭಾಸ್ಕರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಕವಿತಾ ಲಿಂಗರಾಜು,ಉದಯಕುಮಾರ್ ಹೆಗ್ಡೆ, ಖಾಂಡ್ಯ ಹೋಬಳಿ ಬಿಜೆಪಿ ಅಧ್ಯಕ್ಷ ರವಿ, ಮುದರ ಪೂಜಾರಿ ಅದ್ದಡ ಸತೀಶ್, ಹೊಸೂರು ದಿನೇಶ್, ಚಂದ್ರಶೇಖರ್‌, ಗ್ರಾಮ ಪಂಚಾಯಿತಿ ಸದಸ್ಯ ರಘು ಹಾಗೂ ಖಾಂಡ್ಯ ಹೋಬಳಿಯ ಬಿಜೆಪಿ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry