ಆರ್‌ಎಸ್‌ಎಸ್‌ನಿಂದ ಪಥಸಂಚಲನ

ಬುಧವಾರ, ಜೂನ್ 26, 2019
24 °C

ಆರ್‌ಎಸ್‌ಎಸ್‌ನಿಂದ ಪಥಸಂಚಲನ

Published:
Updated:

ಗಂಗಾವತಿ: ತಾಲ್ಲೂಕಿನ ಶ್ರೀರಾಮನಗರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಿಕ್ಷಾರ್ಥಿಗಳು ಭಾನುವಾರ ಪಥಸಂಚಲನ ನಡೆಸಿದರು. ಗ್ರಾಮ ಪಂಚಾಯಿತಿ ಹಿಂದಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಿಂದ ಆರಂಭವಾದ ಪಥ ಸಂಚಲನ ಗ್ರಾಮದ ಪ್ರಮುಖ ವೃತ್ತ, ರಸ್ತೆಗಳಲ್ಲಿ ಸಂಚರಿಸಿತು. ಬಳಿಕ ಕೊಪ್ಪಳ ಹೈದರಬಾದ್‌ ರಾಜ್ಯ ಹೆದ್ದಾರಿಯಲ್ಲಿ ಶಿಕ್ಷಾರ್ಥಿಗಳು ಪಥಸಂಚಲನ ನಡೆಸಿದರು.

ಗ್ರಾಮದಲ್ಲಿ ಮೊದಲ ಬಾರಿಗೆ ನಡೆದ ಪಥಸಂಚಲಕ್ಕೆ ನಾಗರಿಕರು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದರು. ಪಥ ಸಂಚಲನ ನಡೆಯುವ ರಸ್ತೆಯುದ್ದಕ್ಕೂ ಇಕ್ಕೆಲುಗಳಲ್ಲಿ ನಿಂತ ಮಹಿಳೆಯರು, ಮಕ್ಕಳು ಹಾಗೂ ವಿವಿಧ ಸಂಘಟನೆಗಳ ಪುಷ್ಪ ಎರಚಿ ಸ್ವಾಗತಿಸಿದರು.

ಸಂಸದ ಕರಡಿ ಸಂಗಣ್ಣ, ಮಾಜಿ ಸಂಸದ ಶಿವರಾಮಗೌಡ, ಮಾಜಿ ಶಾಸಕ ಪರಣ್ಣ ಮುನವಳ್ಳಿ ಮುಖಂಡರಾದ ದಢೇಸ್ಗೂರು ಬಸವರಾಜ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ದುರ್ಗಾರಾವ್, ಕೆ. ಶ್ರೀನಿವಾಸ, ಎಂ.ಜೆ. ರವಿಕುಮಾರ, ಅನ್ನೇ ಚಂದ್ರಶೇಖರ, ಸತ್ಯನಾರಾಯಣ ದೇಶಪಾಂಡೆ, ಮುಳ್ಳಪೂಡಿ ಶ್ರೀನಿವಾಸ ಇತರರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry